ಬಂಟ್ವಾಳ

ಶಿಕ್ಷಕರು, ಪಿಡಿಒ, ಕಾರ್ಮಿಕ ಇಲಾಖೆ ಸಿಬ್ಬಂದಿಯನ್ನೂ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ: ಮಾಜಿ ಸಚಿವ ರಮಾನಾಥ ರೈ

ಬಂಟ್ವಾಳ: ಶಿಕ್ಷಕರು, ಪಂಚಾಯತ್ ಪಿಡಿಓ, ಕಾರ್ಮಿಕ ಇಲಾಖೆಯ ಸಿಬಬಂದಿಯನ್ನು ಕೊರೊನಾ ವಾರಿಯರ್ಸ್ ಪಟ್ಟಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಕೊರೊನಾ ನಿಯಂತ್ರಣ ಕಾರ್ಯದಲ್ಲಿ ದುಡಿಯುತ್ತಿರುವ ಎಲ್ಲರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಸರಕಾರದ ಎಲ್ಲ ವಿಶೇಷ ಸೌಲಭ್ಯ ನೀಡಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಗ್ರಾಮ ಪಂಚಾಯತು ಮಟ್ಟದಲ್ಲಿ ಕೊರೊನಾ ಸೋಂಕು ನಿಯಂತ್ರಣ ಕಾರ್ಯದಲ್ಲಿ ಶಾಲಾ ಶಿಕ್ಷಕರು ಮತ್ತು ಗ್ರಾಮ ಪಂಚಾಯತುಗಳ ಪಂಚಾಯತು ಅಭಿವೃದ್ಧಿ ಅಧಿಕಾರಿ (ಪಿಡಿಓ) ಪಾತ್ರ ಮಹತ್ವದಾಗಿದ್ದು, ಇವರನ್ನು ಕೂಡ ಕೊರೊನಾ ವಾರಿಯರ್ಸ್ ಎಂದು ಸರಕಾರ ಕೂಡಲೇ ಪರಿಗಣಿಸಬೇಕು ಎಂದು ರಮಾನಾಥ ರೈ ಒತ್ತಾಯಿಸಿದ್ದಾರೆ. ಇದೇ ರೀತಿಯಲ್ಲಿ ವಲಸೆ ಕಾರ್ಮಿಕರು ಸೇರಿದಂತೆ ಇನ್ನಿತರ ಕಾರ್ಮಿಕರೊಂದಿಗೆ ಸಂಪರ್ಖ ಹೊಂದಿರುವ ಮತ್ತು ಕೊರೊನಾ ನಿಯಂತ್ರಣ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕ ಇಲಾಖೆಯ ನೌಕರರಿಗೆ ಕೂಡ ಕೊರೊನಾ ವಾರಿಯರ್ಸ್ ಗಳಿಗ ನೀಡಲಾಗುವ ಸೌಲಭ್ಯಗಳನ್ನು ನೀಡಬೇಕು ಎಂದವರು ಪತ್ರಿಕಾ ಹೇಳಿಕೆಯ ಮೂಲಕ ಸರಕಾರವನ್ನು ಒತ್ತಾಯಿಸಿದ್ದಾರೆ.

ಈಗಾಗಲೇ ನಮ್ಮ ರಾಜ್ಯದಲ್ಲಿ ಹಲವು ಮಂದಿ ಶಿಕ್ಷಕರು, ಶಿಕ್ಷಣ ಇಲಾಖೆ ಸಿಬ್ಬಂದಿ ಕೋವಿಡ್‌ ಸೋಂಕಿನಿಂದಾಗಿ ಸಾವಿಗೀಡಾಗಿದ್ದಾರೆ. ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೋವಿಡ್‌ ಕಾರ್ಯಕ್ಕಾಗಿ ತೊಡಗಿಸಿಕೊಳ್ಳಲಾಗಿದೆ. ಇವರೆಲ್ಲರನ್ನು ಕೊರೊನಾ ವಾರಿಯರ್ಸ್‌ ಎಂದು ಪರಿಗಣಿಸುವುದು ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts