ಬಂಟ್ವಾಳ: ಬಂಟ್ವಾಳ ತಾಲೂಕಿನ ಕರೋಪಾಡಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು.
ಕೋರೋನಾ ನಿಗ್ರಹಕ್ಕೆ ಪೂರಕವಾಗಿ ಉತ್ತಮವಾಗಿ ಕೆಲಸನಿರ್ವಹಿಸಿದ ಗ್ರಾ.ಪಂ.ಆಡಳಿತ, ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆ ಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಕಾರ್ಯವನ್ನು ಶ್ಲಾಘಿಸಿದರು,
ತಹಶೀಲ್ದಾರ್ ರಶ್ಮಿ ಎಸ್. ಆರ್. ಮಾತನಾಡಿ, ದ್ವಿತೀಯ ಲಸಿಕೆ ಪಡೆದುಕೊಳ್ಳುವವರು ಸಂಬಂಧಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಸೂಚನೆ ಬಂದ ಬಳಿಕವಷ್ಟೇ ಆಸ್ಪತ್ರೆಗೆ ಬಂದು ಲಸಿಕೆ ಪಡೆದುಕೊಳ್ಳಬೇಕು, ನಿಗದಿತ ಕಾಲಕ್ಕೆ ಸೂಚನೆ ನೀಡಲು ವ್ಯವಸ್ಥೆ ಮಾಡಲಾಗಿದೆ, ಆದರೆ ಪ್ರಥಮ ಲಸಿಕೆ ಪಡೆದುಕೊಳ್ಳದೇ ಇರುವವರು ಕಡ್ಡಾಯವಾಗಿ ಮುಂಚಿತವಾಗಿಯೇ ನೋಂದಣಿ ಮಾಡಬೇಕು ಎಂದರು. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಮಾತನಾಡಿ, ಕೊರೋನಾ ದ ವಿರುದ್ಧ ಪಂಚಾಯತ್ ಆಡಳಿತದ ಜನಪ್ರತಿನಿಧಿಗಳು, ಅಧಿಕಾರಿಗಳು ಒಂದೇ ಮನಸ್ಸಿನಿಂದ ಕೆಲಸ ಮಾಡಬೇಕು, ಯಾವುದೇ ರೀತಿಯಲ್ಲೂ ಗೊಂದಲಕ್ಕೆ ಅವಕಾಶ ಕೊಡದೆ ಧೃಡಮನಸ್ಸಿನಿಂದ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
9 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 6 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೂರುಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಸಹಾಯಕಿ ಮಾಹಿತಿ ನೀಡಿದರು. ಕರೋಪಾಡಿ ಗ್ರಾ.ಪಂ.ಅಧ್ಯಕ್ಷ ಮಹಮ್ಮದ್ ಅನ್ವರ್ ಕರೋಪಾಡಿ, ಉಪಾಧ್ಯಕ್ಷ ಚೆನ್ನಪ್ಪ ನಾಯ್ಕ್ ಒಡಿಯೂರು, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ದೇವಪ್ಪ.ಪಿ.ಆರ್,, ಕಂದಾಯ ನಿರೀಕ್ಷಕ ದಿವಾಕರ ಮುಗುಳ್ಯ, ಗ್ರಾಮಕರಣಿಕ ಅನಿಲ್ ಕುಮಾರ್, ವೈದ್ಯಾಧಿಕಾರಿ ಫಿಯೋಲಿನಾ ಡಿ.ಸೋಜ, ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.