ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದಲ್ಲಿ 15 ಕೋವಿಡ್ ಪ್ರಕರಣಗಳಲ್ಲಿ 12 ಗುಣಮುಖವಾಗಿದ್ದು, ಟಾಸ್ಕ್ ಫೋರ್ಸ್ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ. ಈಗ ಕೇವಲ ಮೂರು ಪ್ರಕರಣಗಳು ಮಾತ್ರ ಚಾಲ್ತಿಯಲ್ಲಿದ್ದು ಇನ್ನುಳಿದಂತೆ ಎಲ್ಲರೂ ಗುಣಮುಖರಾಗಿರುತ್ತಾರೆ. ಈ ಕುರಿತು ಟಾಸ್ಕ್ ಫೋರ್ಸ್ ವಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಂಚಾಯಿತಿ ಅಧ್ಯಕ್ಷ ಬಾಲಕೃಷ್ಣ ಆಳ್ವ, ಇದು ಉತ್ತಮ ಬೆಳವಣಿಗೆ ಮತ್ತು ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿಯ ಅತ್ಯುತ್ತಮವಾದ ಕಾರ್ಯವೈಖರಿಯಿಂದ ಸಾಧ್ಯವಾಗಿದೆ ಎಂದರು. ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಶಶಿಕಲಾ, ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ರಾವ್, ಗ್ರಾಮ ಕರಣಿಕೆ ಸುರಕ್ಷಾ ಮಾತನಾಡಿದರು. ಅಂಗನವಾಡಿ ಮತ್ತು ಆಶಾಕಾರ್ಯಕರ್ತೆಯರಿಗೆ ಉಚಿತ ಕೊಡೆ ವಿತರಿಸಲಾಯಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಪಂಚಾಯತ್ ಸದಸ್ಯರು ಹಾಗೂ ಕಾರ್ಯಪಡೆಯ ಸದಸ್ಯರು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಸದಸ್ಯರುಗಳಾದ ಸುದೀಪ್ ಕುಮಾರ್ ಶೆಟ್ಟಿ, ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್ ರವರು ಕೊರೋನ ಪಾಸಿಟಿವ್ ಬಂದ ಕೆಲವು ಮನೆಗಳಿಗೆ ತೆರಳಿ ಪಂಚಾಯತ್ ವತಿಯಿಂದ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸಿದರು