ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ರಸ್ತೆ ಕಾಮಗಾರಿ: ಪ್ರಗತಿ ವೀಕ್ಷಿಸಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ರಸ್ತೆ ಕಾಮಗಾರಿ 2 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದ್ದು, ಇದರ ಪ್ರಗತಿಯನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಶನಿವಾರ ವೀಕ್ಷಿಸಿದರು. ರೂ 2 ಕೋಟಿ ವೆಚ್ಚದಲ್ಲಿ ಬಿ.ಸಿ ರೋಡ್ ನಗರ ಸುಂದರೀಕರಣ ಯೋಜನೆಯಡಿ ಕೈಕುಂಜೆಗೆ ತೆರಳುವ ರಸ್ತೆಯ ಆರಂಭಿಕ 190 ಮೀಟರ್ ಭಾಗದ ಕಾಂಕ್ರೀಟೀಕರಣ ನಡೆಯುತ್ತಿದ್ದು ಎರಡೂ ಬದಿಯಲ್ಲಿ ಅಗಲವಾದ ರಸ್ತೆ ಮಧ್ಯೆ ಡಿವೈಡರ್ ಸಹಿತ ಚರಂಡಿ ಅಭಿವೃದ್ಧಿ ಮೊದಲಾದ ಕೆಲಸ ಕಾರ್ಯಗಳು ನಡೆಯುತ್ತಿವೆ. ಈಗಾಗಲೇ ಕಾಮಗಾರಿಯ ಭಾಗವಾಗಿ ಹಳೇ ಶಿಥಿಲವಾಗಿದ್ದ ರಂಗಮಂದಿರವನ್ನು ಕೆಡಹಲಾಗಿದೆ. ಇದೀಗ ಚರಂಡಿ ಕಾರ್ಯ ನಡೆಯುತ್ತಿದೆ. ಇವೆಲ್ಲವನ್ನೂ ಶಾಸಕ ರಾಜೇಶ್ ನಾಯ್ಕ್ಅವರು ಪರಿಶೀಲಿಸಿದರು. ಈ ಸಂದರ್ಭ ಸುದರ್ಶನ ಬಜ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ರಸ್ತೆ ಕಾಮಗಾರಿ: ಪ್ರಗತಿ ವೀಕ್ಷಿಸಿದ ಶಾಸಕ ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*