


ಬಂಟ್ವಾಳ: ಬಂಟ್ವಾಳ ತಾಲೂಕಿನ ಕೃಷಿ ಇಲಾಖೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಲಭ್ಯವಿದೆ ಎಂದು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಭತ್ತದ ಬಿತ್ತನೆಗಾಗಿ ಎಂಒ-4 (ಭದ್ರ) ತಳಿಯ ಬಿತ್ತನೆ ಬೀಜವನ್ನು ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನಿರಿಸಲಾಗಿದ್ದು, ಲಾಕ್ ಡೌನ್ ಅವಧಿಯಲ್ಲಿ ಬೆಳಗ್ಗೆ 6ರಿಂದ 10ರವರೆಗೆ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ, ಬಿತ್ತನೆ ಬೀಜ ಹಾಗೂ ಇತರ ಪರಿಕರ ಪಡೆಯಬಹುದಾಗಿದೆ. ಬಂಟ್ವಾಳ ಕಸಬಾ ರೈತ ಸಂಪರ್ಕ ಕೇಂದ್ರದಲ್ಲಿ 26 ಕ್ವಿಂಟಲ್, ಪಾಣೆಮಂಗಳೂರು ರೈತ ಸಂಪರ್ಕ ಕೇಂದ್ರದಲ್ಲಿ 23.75 ಕ್ವಿಂಟಲ್ ಹಾಗೂ ವಿಟ್ಲ ರೈತ ಸಂಪರ್ಕ ಕೇಂದ್ರದಲ್ಲಿ 16.75 ಕ್ವಿಂಟಲ್ ಎಂಒ-4 (ಭದ್ರ) ಬಿತ್ತನೆ ಬೀಜ ದಾಸ್ತಾನಿದೆ. ಆಸಕ್ತ ರೈತರು ಆರ್.ಟಿ.ಸಿ., ಆಧಾರ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆ ವಿವರಗಳೊಂದಿಗೆ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಬಿತ್ತನೆ ಬೀಜ ಪಡೆಯಬಹುದು ಎಂದು ಕೃಷಿ ಇಲಾಖೆಯ ಬಂಟ್ವಾಳ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment on "ಬಂಟ್ವಾಳ: ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ಲಭ್ಯ"