ಸರ್ಕಾರಿ ಕಚೇರಿ

ಬಂಟ್ವಾಳ: ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ಲಭ್ಯ

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೃಷಿ ಇಲಾಖೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಲಭ್ಯವಿದೆ ಎಂದು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.  ಭತ್ತದ ಬಿತ್ತನೆಗಾಗಿ ಎಂಒ-4 (ಭದ್ರ) ತಳಿಯ ಬಿತ್ತನೆ ಬೀಜವನ್ನು ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನಿರಿಸಲಾಗಿದ್ದು, ಲಾಕ್ ಡೌನ್ ಅವಧಿಯಲ್ಲಿ ಬೆಳಗ್ಗೆ 6ರಿಂದ 10ರವರೆಗೆ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ, ಬಿತ್ತನೆ ಬೀಜ ಹಾಗೂ ಇತರ ಪರಿಕರ ಪಡೆಯಬಹುದಾಗಿದೆ. ಬಂಟ್ವಾಳ ಕಸಬಾ ರೈತ ಸಂಪರ್ಕ ಕೇಂದ್ರದಲ್ಲಿ 26 ಕ್ವಿಂಟಲ್, ಪಾಣೆಮಂಗಳೂರು ರೈತ ಸಂಪರ್ಕ ಕೇಂದ್ರದಲ್ಲಿ 23.75 ಕ್ವಿಂಟಲ್ ಹಾಗೂ ವಿಟ್ಲ ರೈತ ಸಂಪರ್ಕ ಕೇಂದ್ರದಲ್ಲಿ 16.75 ಕ್ವಿಂಟಲ್ ಎಂಒ-4 (ಭದ್ರ) ಬಿತ್ತನೆ ಬೀಜ ದಾಸ್ತಾನಿದೆ. ಆಸಕ್ತ ರೈತರು ಆರ್.ಟಿ.ಸಿ., ಆಧಾರ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆ ವಿವರಗಳೊಂದಿಗೆ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಬಿತ್ತನೆ ಬೀಜ ಪಡೆಯಬಹುದು ಎಂದು ಕೃಷಿ ಇಲಾಖೆಯ ಬಂಟ್ವಾಳ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ