ಬಂಟ್ವಾಳ

ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಮನವಿ

ಕೊರೊನಾ ಸಲಿಕೆಯನ್ನು ಪಲ್ಸ್ ಪೊಲೀಯೋ ಲಸಿಕೆ ನೀಡಿದಂತೆ ವಿವಿಧ ಕೇಂದ್ರಗಳಲ್ಲಿ ಒದಗಿಸಿ, ಹಿರಿಯ ನಾಗರಿಕರಿಗೆ ಸಹಕಾರಿಯಾಗುವಂತೆ ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ನಿಯೋಗದಲ್ಲಿ ಸಂಘದ ಕಾರ್ಯದರ್ಶಿ ಶೇಷಪ್ಪ ಮಾಸ್ಟರ್, ಸದಸ್ಯ ದೊಂಬಯ್ಯ ಕುಲಾಲ್, ಯುವವೇದಿಕೆ ಜಿಲ್ಲಾಧ್ಯಕ್ಷ ಸುಕುಮಾರ್ ಬಂಟ್ವಾಳ್, ಸಂಚಾಲಕ ಕಾರ್ತಿಕ್ ಮಯ್ಯರಬೈಲ್,ಪುನೀತ್ ಭಂಡಾರಿಬೆಟ್ಟು ವಿನೀಶ್ ಕಾಮಾಜೆ ಜೊತೆಗಿದ್ದರು

ಲಸಿಕೆಯು ಪ್ರಾಥಮಿಕ ಮತ್ತು ಸಮುದಾಯ ಅರೋಗ್ಯ ಕೇಂದ್ರದಲ್ಲಿ ವಿತರಿಸುತ್ತಿದ್ದು, ಜನರಿಗೆ ವಾಹನವಿಲ್ಲದೆ ಹೋಗಿ ಬರಲು ಕಷ್ಟವಾಗುತ್ತಿದ್ದು, ಪಲ್ಸ್ ಪೋಲಿಯೊ ಲಸಿಕೆ ನೀಡಿದಂತೆ ಪಂಚಾಯತು, ಶಾಲೆ, ಅಂಗನವಾಡಿಗಳಲ್ಲಿ ದಿನಾಂಕಗಳನ್ನು ನಿಗದಿಪಡಿಸಿ, ಪ್ರಥಮವಾಗಿ ಹಿರಿಯ ನಾಗರಿಕರಿಗೆ ನಂತರ 45 ವರ್ಷ ಮೇಲ್ಪಟ್ಟವರಿಗೆ ಕೊನೆಗೆ ಇತರರಿಗೆ ವಿತರಿಸುವರೇ ಕ್ರಮಕೈಗೊಳ್ಳಬೇಕಾಗಿ ವಿನಂತಿಸಲಾಗಿದೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ