



ಬಂಟ್ವಾಳ: ಬಂಟ್ವಾಳ ತಾಲೂಕಿನ ಮಾಣಿ ಗ್ರಾಮ ವ್ಯಾಪ್ತಿಯ ಶಂಭುಗ ಬಳಿಯ ಬಂಗುಲೆ ರಸ್ತೆ ಕಾಂಕ್ರೀಟ್ ಕಾಮಗಾರಿ 3.5 ಲಕ್ಷ ರೂ ವೆಚ್ಚದಲ್ಲಿ ಪಂಚಾಯಿತಿ ಅನುದಾನದಲ್ಲಿ ನಡೆಯುತ್ತಿದ್ದು, ಇದನ್ನು ಪಂಚಾಯಿತಿ ಆಡಳಿತ ಸದಸ್ಯರು ವೀಕ್ಷಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಸದಸ್ಯರುಗಳಾದ ಸುದೀಪ್ ಕುಮಾರ್ ಶೆಟ್ಟಿ, ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್ ಉಪಸ್ಥಿತರಿದ್ದರು. ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೂರಿಕುಮೇರು ಬದ್ರಿಯಾ ಗ್ರೌಂಡ್ ರಸ್ತೆ 5 ಲಕ್ಷ ರೂ ವೆಚ್ಚದಲ್ಲಿ ಮತ್ತು ಅಂಗನವಾಡಿ ಬಳಿಯ ರಸ್ತೆ 1.5 ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟೀಕರಣಗೊಳಿಸಲಾಗಿದೆ ಎಂದು ಅಧ್ಯಕ್ಷ ಬಾಲಕೃಷ್ಣ ಆಳ್ವ ತಿಳಿಸಿದ್ದಾರೆ.

Be the first to comment on "ಮಾಣಿ ಗ್ರಾಪಂ ಅಧ್ಯಕ್ಷ, ಸದಸ್ಯರಿಂದ ರಸ್ತೆ ಕಾಂಕ್ರೀಟ್ ಕಾಮಗಾರಿ ವೀಕ್ಷಣೆ"