ಮಂಗಳೂರು: ಗ್ರಂಥಾಲಯ ಮೇಲ್ವಿಚಾರಕರ ಗೌರವಧನ ಹೆಚ್ಚಳದ ಕುರಿತು ಸಂಘ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಕೆ.ಹರೀಶ್ ಪೂಂಜಾ ಅವರು ವಿಧಾನಸಭೆ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿ, ಸರ್ಕಾರವನ್ನು ಒತ್ತಾಯಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರ ಗೌರವಧನವನ್ನು ಹೆಚ್ಚಿಸಿರುವುದಲ್ಲದೇ ಗ್ರಂಥಾಲಯ ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಕಲ್ಪಿಸಿ ಆದೇಶಿಸಿದೆ.
ಈ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ಅವರಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರ ಸಂಘ(ರಿ) ದ.ಕ.ಜಿಲ್ಲಾ ಶಾಖೆ ಅಧ್ಯಕ್ಷ ವೆಂಕಪ್ಪ ಬಿ. ಕೃತಜ್ಞತೆ ಸಲ್ಲಿಸಿದ್ದಾರೆ. ಈ ನಿಟ್ಟಿನಲ್ಲಿ ಸಹಕರಿಸಿದ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಉಮಾ ಮಹಾದೇವನ್ ಮತ್ತು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖಾಧಿಕಾರಿಗಳು ಮತ್ತು ನೌಕರರ ಸಂಘದ ಮೂಲಕ ಮನವಿ ಸಲ್ಲಿಸಿ ಸಹಕರಿಸಿದ ಜಿಲ್ಲಾ ಸಂಘದ ಅಧ್ಯಕ್ಷರಾದ ಪಿ.ಎಚ್.ಪ್ರಕಾಶ್ ಶೆಟ್ಟಿ ಹಾಗೂ ಎಲ್ಲಾ ಪದಾಧಿಕಾರಿಗಳಿಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ಪರವಾಗಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
Be the first to comment on "ರಾಜ್ಯದ ಗ್ರಂಥಾಲಯ ಮೇಲ್ವಿಚಾರಕರ ಗೌರವಧನ ಹೆಚ್ಚಳ, ಬಯೋಮೆಟ್ರಿಕ್ ಹಾಜರಾತಿ: ಮೇಲ್ವಿಚಾರಕರ ಜಿಲ್ಲಾ ಸಂಘದಿಂದ ಕೃತಜ್ಞತೆ"