ಗೋಳ್ತಮಜಲು 182 ಬೂತ್ ಸಮಿತಿ ವತಿಯಿಂದ ಕಾರ್ಯಕ್ರಮ
ಹಿರಿಯ ನಾಯಕ ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 7 ನೇ ವರ್ಷದ ಸಂದರ್ಭದಲ್ಲಿ ಸೇವಾ ಕಾರ್ಯದ ಮೂಲಕ ಗೋಳ್ತಮಜಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿಯ 182 ಬೂತ್ ಸಮಿತಿ ವತಿಯಿಂದ ಆಯ್ದ ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಿಸಲಾಯಿತು. 182 ಬೂತ್ ಸಮಿತಿಯ ಅಧ್ಯಕ್ಷರಾದ ಬೈದರಡ್ಕ ಪ್ರಭಾಕರ ಶೆಟ್ಟಿ ಅಧ್ಯಕ್ಷತೆಯಲ್ಲಿ ಭಾಜಪ ಎಸ್ಸಿ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಹಾಗೂ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ದಿನೇಶ್ ಅಮ್ಟೂರು ವಿತರಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ಪ್ರೇಮ ಕಾರ್ಯಕರ್ತರಾದ ಗುರುವಪ್ಪ, ಚಂದು ಕೃಷ್ಣಾಪುರ ಇನ್ನಿತರರು ಉಪಸ್ಥಿತರಿದ್ದರು
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…