ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿ.ಜೆ.ಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಟದ ವತಿಯಿಂದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 7ನೇ ವರ್ಷದ ಸಂಭ್ರಮಾಚರಣೆಯನ್ನು. ಸೇವಾಹಿ ಸಂಘಟನೆಯ ಪ್ರಯುಕ್ತ ಮಂಗಳೂರಿನ ಪಚ್ಚನಾಡಿಯಲ್ಲಿರುವ ನಿರಾಶ್ರಿತರ ಕೇಂದ್ರಕ್ಕೆ ಹಣ್ಣು ಹಂಪಲು ಮತ್ತು ಸಿಹಿಯನ್ನು ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕ ಉಮನಾಥ ಕೋಟ್ಯಾನ್, ಮನಪಾ ಸದಸ್ಯರಾದ ಸಂಗೀತಾ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಯಾದ ಪೂಜಾ ಪೈ, ಮಂಗಳೂರು ಉತ್ತರ ಮಂಡಲದ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಅಸಂಘಟಿತ ಕಾರ್ಮಿಕರ ಪ್ರಕೋಷ್ಟದ ಜಿಲ್ಲಾ ಸಂಚಾಲಕರಾದ ಜಯಂತ ಸಾಲ್ಯಾನ್, ಸಹ ಸಂಚಾಲಕರಾದ ಹರೀಶ ಆಚಾರ್ಯ ರಾಯಿ , ಸಮಿತಿ ಸದಸ್ಯರಾದ ಸಂತೋಷ್ ಉಳ್ಳಾಲ್, ಮಂಗಳೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾದ ಗೋಕುಲ್ ದಾಸ್ ಶೆಟ್ಟಿ,ಮೂಡುಶೆಡ್ಡೆ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ, ಹಾಗೂ ಪಕ್ಷದ ಇತರ ಪ್ರಮುಖರು ಹಾಜರಿದ್ದರು
Be the first to comment on "ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಠದಿಂದ ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಸ್ವೀಕಾರದ ಏಳನೇ ವರ್ಷಾಚರಣೆ"