ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿ ಏಳು ವರ್ಷಗಳಾದ ಹಿನ್ನೆಲೆಯಲ್ಲಿ ಸೇವಾ ಚಟುವಟಿಕೆಯಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೂಚನೆಯಂತೆ ಸ್ಥಾಪಿಸಿದ ಕ್ಷೇಮನಿಧಿಗೆ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಬಿ.ಸಿ.ರೋಡಿನ ರಂಗೋಲಿ ಹೋಟೆಲ್ ನಲ್ಲಿ ಭಾನುವಾರ ಚಾಲನೆ ನೀಡಿದರು.
ಪ್ರತಿ ಜಿಲ್ಲೆಗೆ ಮೆಡಿಕಲ್ ಕಾಲೇಜು ನಿರ್ಮಾಣ, ಪ್ರಾ.ಆ. ಕೇಂದ್ರ ಮೇಲ್ದರ್ಜೆಗೇರಿಸುವಿಕೆಯನ್ನು ರಾಜ್ಯ ಸರ್ಕಾರ ಮಾಡಲಿದೆ. 241 ಲ್ಯಾಬ್ ರಚನೆ ರಾಜ್ಯದಲ್ಲಿ ಆಗಿದ್ದು, ಎಲ್ಲ ತಾಲೂಕು ಕೇಂದ್ರಗಳಿಗೆ ಆಕ್ಸಿಜನ್ ಘಟಕ ನಿರ್ಮಾಣ ಆಗಿದೆ ಇದು ರಾಜ್ಯ ಸರ್ಕಾರದ ಸಾಧನೆಯಾದರೆ, ಕಾಂಗ್ರೆಸ್ ಕೇವಲ ಟೀಕೆಗಳನ್ನು ಮಾಡುತ್ತಾ ಜನರ ದಾರಿ ತಪ್ಪಿಸುತ್ತಿದೆ. ಎಂದರು. ಶಾಸಕ ರಾಜೇಶ್ ನಾಯ್ಕ್ ಕ್ಷೇಮನಿಧಿ ಕುರಿತು ಮಾಹಿತಿ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಉಪಸ್ಥಿತರಿದ್ದರು. ಬುಡಾ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮ ಬಗ್ಗೆ ಮಾಹಿತಿ ನೀಡಿದರು. ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ನಿರೂಪಿಸಿದರು. ಮತ್ತೋರ್ವ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ವಂದಿಸಿದರು. ಬಂಟ್ವಾಳ ಪುರಸಭೆ ವ್ಯಾಪ್ತಿಯ ಪೌರಕಾರ್ಮಿಕರು, ಆಶಾ ಕಾರ್ಯಕರ್ತರಿಗೆ ಕಿಟ್ ವಿತರಿಸಲಾಯಿತು.