ಬಂಟ್ವಾಳ

ತುಳುನಾಡು ಪೊರ್ಲು ಸೇವಾ ಟ್ರಸ್ಟ್ (ರಿ)ಯಿಂದ ಧನಸಹಾಯ

ಬಂಟ್ವಾಳದ ಕುಟುಂಬವೂ ಸೇರಿದಂತೆ ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ ) ದಕ್ಷಿಣ ಕನ್ನಡದಿಂದ ಎರಡು ಕುಟುಂಬಗಳಿಗೆ ಧನ ಸಹಾಯ ಹಸ್ತಾಂತರಿಸಲಾಗಿದೆ. ಮಾರ್ಚ್ 10ರಂದು ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಂಟ್ವಾಳ ತಾಲೂಕಿನ ನಿತ್ಯಾನಂದ ನಗರ ಮುಗ್ದಲ್ ಗುಡ್ಡೆಯ ವಿನಯ್ ರವರ ಕುಟುಂಬಕ್ಕೆ ರೂ. 25,000 ಚೆಕ್ ನ ಧನ ಸಹಾಯ ಮತ್ತು ಕಳೆದ ಒಂದು ವರ್ಷದಿಂದ ಬೆನ್ನುಮೂಳೆ ಕ್ಯಾನ್ಸರ್ ನಿಂದ ಬಳಲುತ್ತಿರುವ ಮಂಗಳೂರು ಬಿಜೈ ನ್ಯೂ ರೋಡ್ ನಝರತ್ ಕಂಪೌಂಡ್ ಬಳಿ ವಾಸಿಸುತ್ತಿರುವ ಮ್ಯಾಕ್ಸಿಮ್ ಡಿಸೋಜ ರವರ ಚಿಕಿತ್ಸೆಗೆ ರೂ. 20,000 ಧನ ಸಹಾಯ ಹಸ್ತಾಂತರಿಸಲಾಯಿತು ಈ ಸಮಯದಲ್ಲಿ ಸೇವಾ ಮಾಣಿಕ್ಯರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts