



ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸ್ಸೈ ಜಯರಾಮ ರೈ (58) ಸೋಮವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಪತ್ನಿ , ಪುತ್ರ, ಪುತ್ರಿಯನ್ನು ಅವರು ಹೊಂದಿದ್ದರು. ಕೆಲ ದಿನಗಳ ಹಿಂದೆ ಅಸೌಖ್ಯದಿಂದ ಆಸ್ಪತ್ರೆಗೆ ದಾಖಲಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬಂಟ್ವಾಳ ತಾಲೂಕಿನ ಮಂಚಿ ನಿವಾಸಿಯಾಗಿದ್ದ ಅವರು ದಕ್ಷಿಣ ಕನ್ನಡದ ವಿವಿಧ ಠಾಣೆಗಳಲ್ಲಿ ಕರ್ತವ್ಯ ಸಲ್ಲಿಸಿದ್ದು, ಬಂಟ್ವಾಳ ಠಾಣೆಯಲ್ಲಿ ಸುದೀರ್ಘ ಕಾಲ ಕರ್ತವ್ಯ ಸಲ್ಲಿಸಿದ್ದರು. ತಾಳ್ಮೆ, ಸಮಾಧಾನಿಯಾಗಿ ನಗುಮೊಗದಿಂದ ಸಾರ್ವಜನಿಕರೊಂದಿಗೆ ವ್ಯವಹರಿಸುತ್ತಿದ್ದ ಜಯರಾಮ ರೈ ಅವರು ಇತ್ತೀಚೆಗೆ ಎಎಸ್ಸೈ ಆಗಿ ಭಡ್ತಿ ಹೊಂದಿ ಬಂಟ್ವಾಳ ನಗರ ಠಾಣೆಯಲ್ಲಿ ಕರ್ತವ್ಯ ಸಲ್ಲಿಸಿದ್ದರು.
Be the first to comment on "ಬಂಟ್ವಾಳ ನಗರ ಪೊಲೀಸ್ ಠಾಣೆ ಎಎಸ್ಸೈ ಜಯರಾಮ ರೈ ನಿಧನ"