ಬಂಟ್ವಾಳ: ಬಾಳ್ತಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸೋಮವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ವೈದ್ಯರ ನಡೆ, ಹಳ್ಳಿಯ ಕಡೆ ಅಭಿಯಾನಕ್ಕೆ ಚಾಲನೆ ನೀಡಿದರು.
ಬಂಟ್ವಾಳ ತಾಲೂಕಿನ 17 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ಕಾರ್ಯ ನಡೆಯುತ್ತಿದ್ದು, ವೈದ್ಯಾಧಿಕಾರಿ ಮತ್ತು ತಂಡ ಎ.ಜೆ.ಆಸ್ಪತ್ರೆಯ ಸಹಯೋಗದೊಂದಿಗೆ ಮನೆ ಮನೆಗೆ ಭೇಟಿ ನೀಡಿ ಪರೀಕ್ಷೆ ನಡೆಸುವ ಕಾರ್ಯ ನಡೆಸುತ್ತದೆ ಎಂದರು.
ತಹಶೀಲ್ದಾರ್ ರಶ್ಮಿ ಎಸ್. ಆರ್, ಜಿಪಂ ಮಾಜಿ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ಬಾಳ್ತಿಲ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚೈತ್ರಾ, ಎ.ಜೆ ಆಸ್ಪತ್ರೆಯ ವೈದ್ಯರಾದ ಡಾ. ಅರ್ಜುನ್, ಡಾ. ರೋಹಿತ್ ರೆಡ್ಡಿ, ಡಾ. ಪ್ರತೀಕಾ, ಡಾ.ಮೋಹಿತ್, ಡಾ. ರೀತು, ಆರ್.ಬಿ.ಎಸ್.ಕೆ.ವೈದ್ಯಾಧಿಕಾರಿ ಡಾ. ಯಶೋಧಾ, ಗ್ರಾಮ ಪಂಚಾಯತ್ ಅಧ್ಯಕ್ಷೆ ಹಿರಣ್ಮಯಿ, ಉಪಾಧ್ಯಕ್ಷೆ ಜ್ಯೋತಿ, ಗ್ರಾ.ಪಂ.ಸದಸ್ಯರಾದ ಚಂದ್ರಶೇಖರ, ಮಲ್ಲಿಕಾ, ಗ್ರಾಮ ಕರಣಿಕರಾದ ಯಶ್ವಿತಾ,
ಆಶಾ ಕಾರ್ಯಕರ್ತರು, ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು. ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಬಾಳ್ತಿಲದಲ್ಲಿ ವೈದ್ಯರ ನಡೆ, ಹಳ್ಳಿಯ ಕಡೆ ಅಭಿಯಾನಕ್ಕೆ ಶಾಸಕ ರಾಜೇಶ್ ನಾಯ್ಕ್ ಅವರಿಂದ ಚಾಲನೆ"