ಜಿಲ್ಲಾ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ 8 ವೈದ್ಯಕೀಯ ಮಹಾವಿದ್ಯಾಲಯಗಳ ಕಮ್ಯುನಿಟಿ ಮೆಡಿಸಿನ್ ವಿಭಾಗದ ತಜ್ಞರ ತಂಡಗಳ ರಚನೆ

ಕಪ್ಪು ಶಿಲೀಂಧ್ರ ಕಾಟ -ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕೊರೊನಾ ಸೋಂಕಿತರ ಕುರಿತು ನಿಗಾ ಇರಿಸಲು ಈ ಕ್ರಮ


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವೊಂದು ರೋಗಿಗಳು ಕಪ್ಪು ಶಿಲೀಂದ್ರ ಸೋಂಕಿನಿಂದ ಬಳಲುತ್ತಿರುವುದು ವರದಿಯಾಗುತ್ತಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ಕೋವಿಡ್-19 ಸೋಂಕಿತರಾಗಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿರುವಾಗ ಸ್ಟಿರಾಯ್ಡ್ ಬಳಸಿದ ಹಾಗೂ ಮಧುಮೇಹ ಖಾಯಿಲೆಯಿಂದ ಬಳಲುತ್ತಿದ್ದು, ಕೋವಿಡ್-19 ಚಿಕಿತ್ಸೆ ಪಡೆದು ಗುಣಮುಖರಾಗಿ  ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ರೋಗಿಗಳು ಈ ಸೋಂಕಿಗೆ ಒಳಗಾಗುವುದನ್ನು ತಡೆಗಟ್ಟಲು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ದಿನಾಂಕದಿಂದ ಮುಂದಿನ 4 ವಾರಗಳ ಕಾಲ ಅವರ ಆರೋಗ್ಯದ ಬಗ್ಗೆ ನಿಗಾವಹಿಸುವುದು ಅತೀ ಅಗತ್ಯವಾಗಿರುವುದರಿಂದ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ರೋಗಿಗಳ ಆರೋಗ್ಯದ ಬಗ್ಗೆ ನಿಗಾವಹಿಸಲು  ಜಿಲ್ಲೆಯ 8 ವೈದ್ಯಕೀಯ ಮಹಾವಿದ್ಯಾಲಯದ ಕಮ್ಯುನಿಟಿ ಮೆಡಿಸಿನ್ ವಿಭಾಗದ ತಜ್ಞರ ತಂಡವನ್ನು ರಚಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ. ರಾಜೇಂದ್ರ ಕೆ.ವಿ  ಆದೇಶಿಸಿದ್ದಾರೆ.

ಅನಿಯಂತ್ರಿತ ಮಧುಮೇಹ ರೋಗದಿಂದ ಬಳಲುತ್ತಿರುವ ಕೋವಿಡ್ 19 ಸೋಂಕಿತ ರೋಗಿಗಳಲ್ಲಿ ಮತ್ತು ಕೋವಿಡ್ ಚಿಕಿತ್ಸೆಗಾಗಿ ಸ್ಟಿರಾಯ್ಡ್ ಔಷಧವನ್ನು ಬಳಸುವುದರಿಂದ ಈ ಸೋಂಕು ಕೆಲವರಲ್ಲಿ ಕಾಣಿಸಿಕೊಳ್ಳುತ್ತಿರಲು ಕಾರಣವೆಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ತಂಡ ರಚಿಸಲಾಗಿದೆ.  ವೈದ್ಯರ ಹೆಸರು ಹಾಗೂ ತಾಲೂಕು/ವಲಯಗಳ ವಿವರ ಇಲ್ಲಿದೆ:

ಜಾಹೀರಾತು

ಬಂಟ್ವಾಳ ತಾಲೂಕು – ಡಾ. ಸಂಜೀವ ಬಿ., ಮೊ.ಸಂಖ್ಯೆ: 9448114146(ಎ.ಜೆ ಮೆಡಿಕಲ್ ಕಾಲೇಜು, ಮಂಗಳೂರು),  ಬೆಳ್ತಂಗಡಿ ತಾಲೂಕು – ಡಾ. ಸೌರಭ್, ಮೊ.ಸಂಖ್ಯೆ:7026288455 (ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ, ಮಂಗಳೂರು), ಪುತ್ತೂರು ತಾಲೂಕು – ಡಾ. ನಂಜೇಶ್, ಮೊ.ಸಂಖ್ಯೆ:8861373863/ 9916819243(ಕ್ಷೇಮಾ, ಮಂಗಳೂರು), ಮಾಡಬಿದ್ರೆ ತಾಲೂಕು – ಡಾ. ರೇಖಾ ಮೊ.ಸಂಖ್ಯೆ: 9449082214, (ಮಂಗಳೂರು. ಕೆ.ಪಿ.ಎಂ.ಸಿ ಮೆಡಿಕಲ್ ಕಾಲೇಜು),  ಮಂಗಳೂರು ತಾಲೂಕಿನ ಉಳ್ಳಾಲ – ಡಾ. ಪೂನಮ್ ನಾಯ್ಕ್, ಮೊ.ಸಂಖ್ಯೆ: 7259346643,(ಯೆನಪೋಯಾ ಮೆಡಿಕಲ್ ಕಾಲೇಜು ಆಸ್ಪತ್ರೆ, ಮಂಗಳೂರು). ಜಿಲ್ಲೆಯ ಎಲ್ಲಾ  ಆಸ್ಪತ್ರೆಗಳ ನೋಡಲ್ ಅಧಿಕಾರಿಗಳು ತಮ್ಮ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆದು ಮೇ 1 ರನಂತರ ಬಿಡುಗಡೆ ಹೊಂದಿದವರ ಪಟ್ಟಿಯನ್ನು ಮತ್ತು ಮುಂದಿನ ದಿನಗಳಲ್ಲಿ ಬಿಡುಗಡೆ ಹೊಂದಲಿರುವ ರೋಗಿಗಳ ಪಟ್ಟಿಯನ್ನು  ವಿಭಾಗದ ತಜ್ಞರ ತಂಡಕ್ಕೆ ತಾಲೂಕು ಅಥವಾ ವಲಯಗಳಿಗೆ ಹಂಚಿಕೆ ಮಾಡಲಾದ ವೈದ್ಯರಿಗೆ ನೀಡಲು ತಿಳಿಸಲಾಗಿದೆ. ರಚಿಸಲಾಗಿರುವ  ತಂಡವು ಸೋಂಕು ತಗಲುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ನೋಡಲ್ ಅಧಿಕಾರಿಗಳಿಂದ ಪಡೆದ ಪಟ್ಟಿಯಲ್ಲಿರುವ ರೋಗಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿ, ಖಚಿತ ಅಥವಾ ಸಂಶಯಾತ್ಮಕ ಪ್ರಕರಣಗಳು ಕಂಡುಬಂದಲ್ಲಿ ಅಂತಹ ರೋಗಿಗಳ ಸಂಪೂರ್ಣ ಮಾಹಿತಿಯನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಗೆ ತಕ್ಷಣ ತಿಳಿಸಬೇಕು. ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಕ್ರೋಢೀಕೃತ ವರದಿಯನ್ನು ಜಿಲ್ಲಾಧಿಕಾರಿ ಕಚೇರಿಗೆ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರಿಗೆ ದಿನಂಪ್ರತಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗಿದ್ದು, ಕೋವಿಡ್ ಸೋಂಕಿತರ ಆರೈಕೆಗಾಗಿ ಜಿಲ್ಲೆಯಲ್ಲಿನ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಿ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ಒದಗಿಸಲು ಜಿಲ್ಲಾಡಳಿತವು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಪ್ರಸ್ತುತ ಜಿಲ್ಲೆಯಲ್ಲಿ ಪ್ರತಿ ದಿನ ಸುಮಾರು 800 ರಿಂದ 900 ರಷ್ಟು ಕೋವಿಡ್ ಪ್ರಕರಣಗಳು ವರದಿ ಆಗುತ್ತಿದ್ದು ಅದರಲ್ಲಿ ಶೇಕಡಾ 5 ರಿಂದ 10 ರಷ್ಟು ರೋಗಿಗಳು ಜಿಲ್ಲೆಯ ವಿವಿಧ ಸರಕಾರಿ , ಖಾಸಗಿ ಆಸ್ಪತ್ರೆಗಳಲ್ಲಿ ಮತ್ತು ವೈದ್ಯಕೀಯ ವಿದ್ಯಾಲಯದ ಆಸ್ಪತ್ರೆಗಳಲ್ಲಿ ಒಳರೋಗಿಗಳಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುತ್ತಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ