ಬಂಟ್ವಾಳ: ಬಂಟ್ವಾಳ ತಾಲೂಕಿನ ನೆಟ್ಲಮುಡ್ನೂರು ಗ್ರಾಮ ಪಂಚಾಯಿತಿಯಲ್ಲಿ ಕೊರೊನಾ ಟಾಸ್ಕ್ ಫೋರ್ಸ್ ಸಭೆಯನ್ನು ಬುಧವಾರ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಬೆಡ್ ಸೌಕರ್ಯ, ಆಕ್ಸಿಜನ್ ಲಭ್ಯತೆ, ಐಸಿಯು ಎಲ್ಲಾ ಸೌಲಭ್ಯಗಳನ್ನೂ ಬಂಟ್ವಾಳ ಸರಕಾರಿ ಆಸ್ಪತ್ರೆ ಸುಸಜ್ಜಿತವಾಗಿದ್ದು, ಯಾವುದೇ ಆತಂಕ ಪಡಬೇಕಿಲ್ಲ ಎಂದ ಶಾಸಕರು, ಗ್ರಾಪಂನ ಪ್ರಗತಿಯ ಕುರಿತು ಪರಿಶೀಲನೆ ನಡೆಸಿದರು.
ಸದಸ್ಯರನ್ನೂ ಪ್ರಂಟ್ ಲೈನ್ ವಾರಿಯರ್ಸ್ ಆಗಿ ಗುರುತಿಸಲಾಗಿದ್ದು, ಲಸಿಕೆ ಪಡೆಯುವ ಕಾರ್ಯವಾಗಬೇಕು ಎಂದು ಶಾಸಕರು ಸೂಚಿಸಿದರು. ತಹಶೀಲ್ದಾರ್ ರಶ್ಮಿ ಎಸ್. ಆರ್.ಮಾತನಾಡಿ ರೋಗಲಕ್ಷಣಗಳು ಇದ್ದರೆ, ಮನೆಗೇ ವೈದ್ಯರು ಬಂದು ಪರೀಕ್ಷೆ ನಡೆಸುವ ಕಾರ್ಯ ಮಾಡುತ್ತಾರೆ ಎಂದರು.ತಾ.ಪಂ.ಇಒ ರಾಜಣ್ಣ ಮಾತನಾಡಿ, ಸೋಂಕಿತರ ಮನೆಯವರು ಓಡಾಡದಂತೆ ಎಚ್ಚರಿಕೆ ವಹಿಸಲು ವಾರ್ಡ್ ಸದಸ್ಯರು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರು. ಈ ಸಂದರ್ಭಶಾಸಕರು ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಿಸಿದರು. ಗ್ರಾ.ಪಂ.ಅಧ್ಯಕ್ಷ ಸತೀಶ್ ಕೊಪ್ಪರಿಗೆ, ಉಪಾಧ್ಯಕ್ಷೆ ಶಕೀಲಾ ಕೃಷ್ಣಪ್ಪ ಪೂಜಾರಿ, ಅಭಿವೃದ್ಧಿ ಅಧಿಕಾರಿ ಎ.ಬಿ.ಅಜಿತ್ ಕುಮಾರ್, ವಿಟ್ಲ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ, ಗ್ರಾಮಕರಣಿಕ ಮಂಜುನಾಥ್ ಕೆ.ಎಚ್., ಗ್ರಾ.ಪಂ.ಸದಸ್ಯರು, ಶಾಸಕರ ವಾರ್ ರೂಮ್ ಸದಸ್ಯರಾದ ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಟಾಸ್ಕ್ ಫೋರ್ಸ್ ಸದಸ್ಯರು ಉಪಸ್ಥಿತರಿದ್ದರು.