ಬಂಟ್ವಾಳ

ಪಣೋಲಿಬೈಲು: ಬಂಟ್ವಾಳ ತಾಲೂಕಿನ 26 ದೇವಸ್ಥಾನಗಳ ಅರ್ಚಕ, ಸಿಬ್ಬಂದಿಗೆ ಕಿಟ್ ವಿತರಣೆ

ಬಂಟ್ವಾಳ: ಮುಜರಾಯಿ ಇಲಾಖೆಯ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರು, ಸಿಬಂದಿಗೆ ಆಹಾರ ಸಾಮಾಗ್ರಿ ಕಿಟ್ ವಿತರಿಸಲಾಗಿದ್ದು, ಇಲಾಖೆ ವ್ಯಾಪ್ತಿಗೆ ಬರದೆ ಸಂಕಷ್ಟದಲ್ಲಿರುವ ಕ್ಷೇತ್ರಗಳ ಸಿಬಂದಿಗೂ ಕಿಟ್ ಕೊಡುವುದಕ್ಕೆ ಚಿಂತನೆ ನಡೆಸಲಾಗುವುದು ಎಂದು‌ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಹೇಳಿದರು. ಮುಜರಾಯಿ ಇಲಾಖೆಯ ಎ ಗ್ರೇಡ್ ಕ್ಷೇತ್ರವಾದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಿಂದ‌ ತಾಲೂಕಿನ 26 ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳಿಗೆ ಆಹಾರ ಸಾಮಾಗ್ರಿ ‌ಕಿಟ್ ಗಳನ್ನು ಬುಧವಾರ ವಿತರಿಸಿ ಮಾತನಾಡಿದರು.

ರಾಜ್ಯ ಧಾರ್ಮಿಕ ಧತ್ತಿ ಪರಿಷತ್ತ್ ನ ಸದಸ್ಯರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ಮಾತನಾಡಿ, ಮುಜರಾಯಿ ಇಲಾಖೆಯ ಎ ಗ್ರೇಡ್  ದೇವಸ್ಥಾನ ಗಳಿಂದ  ಸಿಗ್ರೇಡ್ ದೇವಸ್ಥಾನ, ದೈವಸ್ಥಾನ ಗಳ ಅರ್ಚಕರು, ಸಿಬ್ಬಂದಿಗಳಿಗೆ ಕಿಟ್ ವಿತರಿಸಿದಂತೆ  ಆದ್ಯತೆಯ ನೆಲೆಯಲ್ಲಿ ಬಿ ಗ್ರೇಡ್ ದೇವಸ್ಥಾನಗಳಿಗೂ ವಿತರಿಸಲು ಚಿಂತನೆ ನಡೆಸಲಾಗಿದೆ ಎಂದರು. ಜಿಲ್ಲಾ ಧಾರ್ಮಿಕ ದತ್ತಿ ‌ಪರಿಷತ್ ಸದಸ್ಯ ಗಿರಿಪ್ರಕಾಶ್ ತಂತ್ರಿ, ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಪಿ.ಜಯಮ್ಮ, ಪ್ರಮುಖರಾದ ವಿವೇಕ್ ಶೆಟ್ಟಿ ನಗ್ರಿಗುತ್ತು, ಜಯರಾಮ ಶೆಟ್ಟಿ, ಸಜಿಪ ಮಾಗಣೆ ತಂತ್ರಿ ಸುಬ್ರಹ್ಮಣ್ಯ ಭಟ್, ಸಜೀಪ ಮೂಡ ಗ್ರಾ.ಪಂ.ಅಧ್ಯಕ್ಷೆ ಹರಿಣಾಕ್ಷಿ ಮೊದಲಾದವರು ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ