ನಿಮಿಷಕ್ಕೆ 47 ಲೀಟರ್ ಆಮ್ಲಜನಕ ಉತ್ಪಾದನೆಯ ಜಿಲ್ಲೆಯ ಪ್ರಥಮ ಘಟಕ ಇದು
ಬಂಟ್ವಾಳ: ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶನಿವಾರ ಆಕ್ಸಿಜನ್ ಘಟಕ ಉದ್ಘಾಟನೆಯಾಗಲಿದೆ. ನಿಮಿಷಕ್ಕೆ 47 ಲೀಟರ್ ಉತ್ಪಾದನಾ ಸಾಮರ್ಥ್ಯ ಹೊಂದಿರುವ ಇದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಘಟಕವಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಕಚೇರಿ ಪ್ರಕಟಣೆ ತಿಳಿಸಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಮುತುವರ್ಜಿಯಿಂದ ಅಮೆರಿಕೇರ್ಸ್ ಇಂಡಿಯಾ ಫೌಂಡೇಶನ್ ಇವರ ಸಿಎಸ್ಆರ್ ನಿಧಿ ಮತ್ತು ಬಂಟ್ವಾಳ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿ ಸೇರಿ ಅಂದಾಜು ಸುಮಾರು ರೂ.1 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿದೆ.,
ಬೆಳಿಗ್ಗೆ 10 ಗಂಟೆಗೆ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇದನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ರಾಜೇಶ್ ನಾಯ್ಕ್ ಸಹಿತ ವಿವಿಧ ಅಧಿಕಾರಿಗಳ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.