ವಾಮದಪದವು

ನಾಳೆ ಬಂಟ್ವಾಳದ ವಾಮದಪದವಿನಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಲೋಕಾರ್ಪಣೆ

ನಿಮಿಷಕ್ಕೆ 47 ಲೀಟರ್ ಆಮ್ಲಜನಕ ಉತ್ಪಾದನೆಯ ಜಿಲ್ಲೆಯ ಪ್ರಥಮ ಘಟಕ ಇದು

ಸಾಂದರ್ಭಿಕ ಚಿತ್ರವಿದು.

ಬಂಟ್ವಾಳ: ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶನಿವಾರ ಆಕ್ಸಿಜನ್ ಘಟಕ ಉದ್ಘಾಟನೆಯಾಗಲಿದೆ. ನಿಮಿಷಕ್ಕೆ 47 ಲೀಟರ್  ಉತ್ಪಾದನಾ ಸಾಮರ್ಥ್ಯ ಹೊಂದಿರುವ ಇದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಘಟಕವಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಕಚೇರಿ ಪ್ರಕಟಣೆ ತಿಳಿಸಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಮುತುವರ್ಜಿಯಿಂದ ಅಮೆರಿಕೇರ್ಸ್ ಇಂಡಿಯಾ ಫೌಂಡೇಶನ್ ಇವರ ಸಿಎಸ್ಆರ್ ನಿಧಿ ಮತ್ತು ಬಂಟ್ವಾಳ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿ  ಸೇರಿ ಅಂದಾಜು ಸುಮಾರು ರೂ.1 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿದೆ.,

ಬೆಳಿಗ್ಗೆ 10 ಗಂಟೆಗೆ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇದನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ರಾಜೇಶ್ ನಾಯ್ಕ್ ಸಹಿತ ವಿವಿಧ ಅಧಿಕಾರಿಗಳ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ