ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಬಂಟ್ವಾಳದ ಬಿ.ಸಿ.ರೋಡ್ ಜಂಕ್ಷನ್ ಬಳಿ ಇರುವ ನಿರಾಶ್ರಿತರು, ವಲಸೆ ಕಾರ್ಮಿಕರು, ಲಾರಿ ಚಾಲಕರಿಗೆ ಉಚಿತ ಊಟ ವಿತರಿಸುವ ವಾಹನಕ್ಕೆ ಮಾಜಿ ಸಚಿವ ರಮಾನಾಥ ರೈ ಅವರು ಚಾಲನೆ ನೀಡಿದರು.
ಈ ಸಂದರ್ಭ ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲ್, ಸುರೇಶ್ ಪೂಜಾರಿ ಜೋರಾ, ಸಿದ್ದಿಕ್ ಸರವೂ, ಹರ್ಷದ್ ಸರವೊ, ಸಿರಾಜ್ ಮದಕ, ಮೆಹರೂಬ್ ಪರ್ಲಿಯಾ, ಕಬೀರ್ ಆಲಡ್ಕ, ಶರೀಫ್ ಬೂಯಾ ಮೊದಲಾದವರು ಉಪಸ್ಥಿತರಿದ್ದರು.
IFTAAR ORGANISED BY FORMER MINISTER RAMANATHA RAI AT PANEMANGALORE (more…)