ಬಂಟ್ವಾಳ

ಬ್ಯಾಂಕ್, ಸೊಸೈಟಿ ಉದ್ಯೋಗಿಗಳಿಗೆ ಬಂಟ್ವಾಳದಲ್ಲಿ ಕೋವಿಡ್ ಲಸಿಕೆ

ಲಯನ್ಸ್ ಕ್ಲಬ್ ಬಂಟ್ವಾಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಸದ ನಳಿನ್

ಬಂಟ್ವಾಳ: ಬಂಟ್ವಾಳ ಲಯನ್ಸ್ ಸೇವಾ ಮಂದಿರದಲ್ಲಿ ಶನಿವಾರ ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಸೊಸೈಟಿಗಳ 18-44 ವರ್ಷದೊಳಗಿನ  ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲು ಕಾರ್ಯಕ್ರಮ ವನ್ನು ಉದ್ಘಾಟಿಸಿ ಶುಭ ಹಾರೈಸಿ, ಕೋವಿಡ್ ಲಸಿಕೆಯನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಉಪಸ್ಥಿತರಿದ್ದರು. ಲಯನ್ಸ್  ಕ್ಲಬ್ ಬಂಟ್ವಾಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ತಹಶಿಲ್ದಾರ್ ರಶ್ಮಿ. ಎಸ್. ಆರ್, ತಾಲೂಕು ಪ್ರಭಾರ ಆರೋಗ್ಯಾಧಿಕಾರಿ ಡಾ. ಜಯಪ್ರಕಾಶ್, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ,  ಕೆನರಾ ಬ್ಯಾಂಕ್ ಡಿ.ಜಿ.ಎಮ್, ಯೋಗೀಶ್ ಆಚಾರ್ಯ, ಕೆನರಾ ಬ್ಯಾಂಕ್ ಆಫೀಸರ್ ಆಸೊಸಿಯೇಶನ್ ಡೆಪ್ಯುಟಿ ಜನರಲ್ ಸಕ್ರೇಟರಿ ರಮೇಶ್ ನಾಯಕ್, ಕೆನರಾ ಬ್ಯಾಂಕ್ ರೀಜನಲ್ ಆಫೀಸರ್ ಮಹೇಶ್ ಕುಮಾರ್ ಎಸ್. ಸ್ವಾಮಿ, ಮ್ಯಾನೇಜರ್ ಆಶೀರ್ವಾದ್ ಆಚಾರ್ಯ, ಬ್ಯಾಂಕ್ ಆಪ್ ಬರೋಡ ಕಲ್ಲಡ್ಕ ಶಾಖೆಯ ಮ್ಯಾನೇಜರ್ ಪ್ರಣಾಮ್, ಲಯನ್ಸ್ ಅಧ್ಯಕ್ಷ ಎಮ್  ಕೃಷ್ಣ ಶ್ಯಾಮ್, ಲಯನ್ಸ್ ವಿಶೇಷ ಮಕ್ಕಳ ಶಾಲಾ ಸಂಚಾಲಕ ದಾಮೋದರ ಬಿ‌.ಎಮ್, ವಲಯ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಲಯನೆಸ್ ದೇವಿಕಾ ದಾಮೋದರ, ಕೋಶಾಧಿಕಾರಿ ದಿಶಾ ಆಶೀರ್ವಾದ್, ಮಾಜಿ ಅಧ್ಯಕ್ಷ ಲಕ್ಷ್ಮಣ ಕುಲಾಲ್, ಜೊತೆ ಕೋಶಾಧಿಕಾರಿ ರಾಘವೇಂದ್ರ ಕಾರಂತ್ ಹಾಜರಿದ್ದರು

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts