ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ಮತ್ತು ಸಾಮಾಜಿಕ ಅರಣ್ಯ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಅವರಣದಲ್ಲಿ ಗಿಡ ನೆಡುವುದರ ಮೂಲಕ ಕೋವಿಡ್ – 19 ಸುರಕ್ಷತಾ ಕ್ರಮಗಳೊಂದಿಗೆ ಆಚರಿಸಲಾಯಿತು.
ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಕಲ್ಯಾಣ, ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಡಾ. ಕುಮಾರ್ ಮಹಾತ್ಮ ಗಾಂಧಿ ನರೇಗಾ ಮತ್ತು ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಗಳ ನೋಡಲ್ ಅಧಿಕಾರಿ ಹಾಗೂ ಉಪಕಾರ್ಯದರ್ಶಿಯವರಾದ. ಕೆ. ಆನಂದ ಕುಮಾರ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧೀನ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು
Be the first to comment on "ಜಿಪಂ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ"