ಬಂಟ್ವಾಳ: ಬಂಟ್ವಾಳ ತಾಲೂಕಿನ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಅಮೆರಿಕೇರ್ಸ್ ಫೌಂಡೇಶನ್ ಮುಂಬೈ ಇದರ ಸಹಯೋಗದೊಂದಿಗೆ ರೂ 1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ದಕ್ಷಿಣಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕ ಬಂಟ್ವಾಳದ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಸಂಸದ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲು, ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಉಪಸ್ಥಿತಿಯಲ್ಲಿ ಲೋಕಾರ್ಪಣೆಗೊಳಿಸಲಾಯಿತು.
ಜಿಲ್ಲೆಯಲ್ಲಿ ಕೊರೋನಾ ನಿಗ್ರಹಕ್ಕೆ ಪೂರಕವಾಗಿ ಆಕ್ಸಿಜನ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಸ್ಥಾಪನೆಯಾದ ಪ್ರಥಮ ಆಕ್ಸಿಜನ್ ಘಟಕ ಇದಾಗಿದೆ ಎಂದವರು ಹೇಳಿದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಬಂಟ್ವಾಳ ಕ್ಷೇತ್ರದಲ್ಲಿ ಕೊರೊನಾ ನಿಗ್ರಹಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿರುವುದಕ್ಕೆ ಸಚಿವರು ಶ್ಲಾಘಿಸಿ, ಅಧಿಕಾರಿ ವೃಂದದ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ವಾಮದಪದವಿನ ಘಟಕ ಪ್ರತಿ ನಿಮಿಷಕ್ಕೆ 46 ಲೀಟರ್ ಆಕ್ಸಿಜನ್ ಉತ್ಪಾದನಾ ಸಾಮರ್ಥ್ಯ ಹೊಂದಿದ್ದು, ಜಿಲ್ಲೆಯ ವಿವಿಧೆಡೆಗಳಲ್ಲಿಯೂ ಹಂತಹಂತವಾಗಿ ಆಕ್ಸಿಜನ್ ಘಟಕ ಸ್ಥಾಪನೆಯಾಗಲಿದೆ ಎಂದವರು ಹೇಳಿದರು. ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಶಾಸಕ ರಾಜೇಶ್ ನಾಯ್ಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಉಪಸ್ಥಿತರಿದ್ದು, ಶುಭ ಹಾರೈಸಿದರು.
ಚೆನ್ನೈತ್ತೋಡಿ ಗ್ರಾ.ಪಂ.ಅಧ್ಯಕ್ಷೆ ಭಾರತಿ ರಾಜೇಂದ್ರ ಪೂಜಾರಿ, ಕುಕ್ಕಿಪಾಡಿ ಗ್ರಾಪಂ ಅಧ್ಯಕ್ಷೆ ಸುಜಾತ ಆರ್ ಪೂಜಾರಿ, ಉಪಾಧ್ಯಕ್ಷ ಯೋಗೀಶ್ ಆಚಾರ್ಯ, ಸಹಾಯಕ ಕಮೀಷನರ್ ಮದನ್ ಮೋಹನ್, ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ತಾಲೂಕು ಪ್ರಭಾರ ಆರೋಗ್ಯ ಅಧಿಕಾರಿ ಡಾ. ಜಯಪ್ರಕಾಶ್, ಆಸ್ಪತ್ರೆ ವೈದ್ಯಾಧಿಕಾರಿ ಡಾ. ಉಮೇಶ್ ಅಡ್ಯಂತಾಯ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ದೇವದಾಸ ಶೆಟ್ಟಿ, ಪ್ರಮುಖರಾದ ದೇವಪ್ಪ ಪೂಜಾರಿ, ಸುಲೋಚನಾ ಜಿ.ಕೆ.ಭಟ್, ಎಂ.ತುಂಗಪ್ಪ ಬಂಗೇರ, ಪ್ರಭಾಕರ ಪ್ರಭು, ಪುರುಷೋತ್ತಮ ಶೆಟ್ಟಿ ವಾಮದಪದವು ಮೊದಲಾದವರು ಉಪಸ್ಥಿತರಿದ್ದರು.