ಬಂಟ್ವಾಳ: ಬಂಟ್ವಾಳ ತಾಲೂಕಿನ ಲೊರೆಟ್ಟೊದಲ್ಲಿ ಯುವ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ ಭಾನುವಾರ ನಡೆಯಿತು. ಲೊರೆಟ್ಟೊ ಚರ್ಚ್ ಹಾಲ್ ನಲ್ಲಿ ರೆಡ್ ಕ್ರಾಸ್ ಸಂಸ್ಥೆ ಸಹಕಾರದಿಂದ ನಡೆದ ಕಾರ್ಯಕ್ರಮದಲ್ಲಿ ಒಟ್ಟು 87 ಯೂನಿಟ್ ರಕ್ತ ಸಂಗ್ರಹವಾಯಿತು. ಮಾಜಿ ಸಚಿವ ಬಿ.ರಮಾನಾಥ ರೈ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ದ. ಕ ಜಿಲ್ಲಾ ರೆಡ್ ಕ್ರಾಸ್ ಸಂಯೋಜಕ ಪ್ರವೀಣ್, ಡಾ ಜೆ ಎನ್ ಭಟ್, ಲೊರೆಟ್ಟೊ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ. ಫ್ರಾನ್ಸಿಸ್ ಕ್ರಾಸ್ತ, ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಷ ಐಸಕ್ ವಾಸ್, ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ದ. ಕ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ, ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಸುರೇಶ್ ಜೋರ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು, ಭೂ ಅಭಿವೃದ್ಧಿ ಬ್ಯಾಂಕ್ ನ ಮಾಜಿ ಅಧ್ಯಕ್ಷರಾದ ಸುದರ್ಶನ್ ಜೈನ್, ಪುರಸಭಾ ಸದಸ್ಯರಾದ ವಾಸು ಪೂಜಾರಿ, ಗಂಗಾಧರ್, ಆಮ್ಟಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರಿಚರ್ಡ್ ಮೆನೀಜಸ್, ಕಥೋಲಿಕ್ ಸಭಾ ಅಧ್ಯಕ್ಷರಾದ ಜೋನ್ ಲಾಸ್ರದೋ, ಪ್ರಮುಖರಾದ ಪ್ರಕಾಶ್ ವಾಸ್, ಬಂಟ್ವಾಳ ಬ್ಲಾಕ್ ಸಾಮಾಜಿಕ ಜಾಲತಾಣ ಸಂಯೋಜಕರಾದ ಪದ್ಮನಾಭ ಸಾಮಂತ್, ಸುದರ್ಶನ್, ದೇವಪ್ಪ ಕುಲಾಲ್, ರಾಜೇಶ್ ಗೌಡ, ಸದಾನಂದ ಶೆಟ್ಟಿ, ಮೋಹನ್ ಶೆಟ್ಟಿ, ಕೇಶವ ಪೂಜಾರಿ ಪಂಜಿಕಲ್ಲು ಮೊದಲಾದವರು ಉಪಸ್ಥಿತರಿದ್ದರು.
Be the first to comment on "ಲೊರೆಟ್ಟೊದಲ್ಲಿ ಯುವ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ"