ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸರಪಾಡಿ ಘಟಕ ವತಿಯಿಂದ ಯಕ್ಷಗಾನ ಕಲಾವಿದರು- ಮೇಳದ ಸಿಬಂದಿಗೆ ಕಿಟ್ ವಿತರಣೆ

ಬಂಟ್ವಾಳ: ಮಂಗಳೂರು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಟ್ರಸ್ಟ್ ಸ್ಥಾಪಕಾಧ್ಯಕ್ಷ, ಯುವ ಭಾಗವತ ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ನೀಡಲಾದ ಅಶಕ್ತ ಕಲಾವಿದರಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ರವಿವಾರ ಫೌಂಡೇಶನ್ ನ ಸರಪಾಡಿ ಘಟಕದ ವತಿಯಿಂದ ಅಜಿಲಮೊಗರಿನ ಕೇಸರಿ ಯುವಕ ಮಂಡಲದಲ್ಲಿ ನಡೆಯಿತು.

ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಮಾತನಾಡಿ, ಕಲಾವಿದರ ಅಭ್ಯುದಯಕ್ಕಾಗಿಯೇ ಸ್ಥಾಪನೆಗೊಂಡ ಯಕ್ಷಧ್ರುವ ಫೌಂಡೇಶನ್ ಕೊರೊನಾ ಸಂಕಷ್ಟದ ವೇಳೆಯೂ ಎರಡೂ ವರ್ಷಗಳಲ್ಲಿಯೂ ಕಲಾವಿದರಿಗೆ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡುವ ಕಾರ್ಯ ಮಾಡಿದೆ. ಸರಕಾರ‌ ನೆರವು ನೀಡುವ ವೇಳೆ ಟೀಕೆ ಮಾಡದೆ ನಮ್ಮ ತಪ್ಪುಗಳನ್ನು ಸರಿಮಾಡುವ ಕೆಲಸ ಮಾಡಬೇಕಿದೆ ಎಂದರು.

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಮಾತನಾಡಿ, ಯಕ್ಷಗಾನ ಕಲಾವಿದರು ವಿಶೇಷ ಜ್ಞಾನಭಂಡಾರವನ್ನು ಹೊಂದಿದ್ದರೂ, ಅವರು ಕಷ್ಟದಲ್ಲೇ ಬದುಕು ಸಾಗಿಸುವ ಪರಿಸ್ಥಿತಿ ಇದೆ. ಸಂಘಟನೆಗಳು ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿ‌ ಬದುಕಿಗೆ ದಾರಿ ತೋರುವ ಕೆಲಸ ಮಾಡಬೇಕಿದ್ದು, ಈ ನಿಟ್ಟಿನಲ್ಲಿ ಯಕ್ಷಧ್ರುವ ಫೌಂಡೇಶನ್ ಕಾರ್ಯ ಶ್ಲಾಘನೀಯ ಎಂದರು.

ಜಾಹೀರಾತು

ಕಾರ್ಯಕ್ರಮದಲ್ಲಿ ಫೌಂಡೇಶನ್ ಸರಪಾಡಿ ಘಟಕದ ಅಧ್ಯಕ್ಷ ಶಶಿಕಾಂತ ಶೆಟ್ಟಿ ಆರುಮುಡಿ, ಮಣಿನಾಲ್ಕೂರು ಗ್ರಾ.ಪಂ.ಸದಸ್ಯ ಪುರುಷೋತ್ತಮ ಪೂಜಾರಿ ಮಜಲು ಮೊದಲಾದವರಿದ್ದರು. ಹಿರಿಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಅವರು ಕಲಾವಿದರ ಪರವಾಗಿ ಟ್ರಸ್ಟಿಗೆ ಕೃತಜ್ಞತೆ ಅರ್ಪಿಸಿದರು.

ಕಾರ್ಯಕ್ರಮದಲ್ಲಿ ಒಟ್ಟು ೨೬ ಮಂದಿ ಅಶಕ್ತ ಕಲಾವಿದರಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು. ಟ್ರಸ್ಟಿನ ಸರಪಾಡಿ ಘಟಕದ ಸಂಚಾಲಕ, ಹಿರಿಯ ಯಕ್ಷಗಾನ ಕಲಾವಿದ ಅಶೋಕ ಶೆಟ್ಟಿ ಸರಪಾಡಿ ಪ್ರಸ್ತಾವನೆಗೈದರು. ಘಟಕದ ಕಾರ್ಯದರ್ಶಿ, ಸರಪಾಡಿ ಗ್ರಾ.ಪಂ.ಸದಸ್ಯ ಎನ್.ಧನಂಜಯ ಶೆಟ್ಟಿ ಸರಪಾಡಿ ಕಾರ್ಯಕ್ರಮ ನಿರ್ವಹಿಸಿದರು. ಗೌರವಾಧ್ಯಕ್ಷ ಡಾ.ಬಾಲಚಂದ್ರ ಶೆಟ್ಟಿ ಮೀಯಾರ್‌ ವಂದಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸರಪಾಡಿ ಘಟಕ ವತಿಯಿಂದ ಯಕ್ಷಗಾನ ಕಲಾವಿದರು- ಮೇಳದ ಸಿಬಂದಿಗೆ ಕಿಟ್ ವಿತರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*