ಬಂಟ್ವಾಳ: ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ಮಾರ್ಗದರ್ಶನದಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಧಾನಸಭೆಯ ಬಂಟ್ವಾಳ ಕ್ಷೇತ್ರದ ಕೊರೊನಾ ಸೋಂಕಿತರ ಕುಟುಂಬಗಳಿಗೆ ನೆರವಾಗಲು ಸ್ಥಾಪಿಸಲಾದ ಇಂದಿರಾ ಕ್ಷೇಮನಿಧಿಗೆ ಬಿ.ಸಿ.ರೋಡಿನ ಹೋಟೆಲ್ ರಂಗೋಲಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಡಿಸಿಸಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮತ್ತು ಮಾಜಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು.
ಜಾತಿ, ಮತಬೇಧವಿಲ್ಲದೆ, ಬಡವ ಬಲ್ಲಿದನಿಲ್ಲದೆ ನೆರವಾಗುವ ಉದ್ದೇಶದಿಂದ ಈ ಕ್ಷೇಮನಿಧಿಯನ್ನು ಆರಂಭಿಸಲಾಗಿದೆ ಎಂದು ಹೇಳಿದ ಹರೀಶ್ ಕುಮಾರ್, ರಾಜ್ಯ, ಕೇಂದ್ರ ಸರ್ಕಾರಗಳು ಜನರ ಪರವಾಗಿ ಕೆಲಸ ಮಾಡಲು ವಿಫಲವಾಗಿರುವ ಹೊತ್ತಿನಲ್ಲಿ ಕಾಂಗ್ರೆಸ್ ದಾನಿಗಳ ನೆರವಿನಿಂದ ಪ್ರತಿಯೊಂದು ಬಡ ಕುಟುಂಬಗಳ ಹಸಿವು ನೀಗಿಸಲು ಶಕ್ತವಾಗಿದೆ. ಜಿಲ್ಲೆಯಲ್ಲಿ ಒಟ್ಟು 13 ಆಂಬುಲೆನ್ಸ್ ಗಳು ಸಕ್ರಿಯವಾಗಿ ಕಾಂಗ್ರೆಸ್ ನಿಂದ ಕಾರ್ಯಾಚರಿಸುತ್ತಿದ್ದು, 9 ರಕ್ತದಾನ ಶಿಬಿರಗಳು ಆಗಿವೆ. 1000 ಯೂನಿಟ್ ರಕ್ತ ಸಂಗ್ರಹಿಸಲಾಗಿದ್ದು, 226 ಯೂನಿಟ್ ಬಂಟ್ವಾಳದಿಂದ ಸಂಗ್ರಹಿತವಾಗಿದೆ, ಮಂಗಳೂರಲ್ಲಿ ವಾರ್ ರೂಮ್ ದಿನದ 24 ತಾಸೂ ಕೆಲಸ ಮಾಡುತ್ತಿದೆ ಎಂದರು. ಜಿಪಂ ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಪದ್ಮಶೇಖರ ಜೈನ್ ,ಎಂ.,ಎಸ್. ಮಹಮ್ಮದ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಬಂಟ್ವಾಳ ಪುರಸಭಾಧ್ಯಕ್ಷ ಮೊಹಮ್ಮದ್ ಶರೀಫ್, ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಪಾಣೆಮಂಗಳೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಲ್ಬರ್ಟ್ ಮೆನೀಜಸ್, ಭೂ ಅಭಿವೃದ್ಧಿ ಬ್ಯಾಂಕ್ ಮಾಜಿ ಅಧ್ಯಕ್ಷ ಸುದರ್ಶನ್ ಜೈನ್, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲ್, ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಜೋರಾ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಪದ್ಮನಾಭ ರೈ, ಬಂಟ್ವಾಳ ಪುರಸಭಾ ಸದಸ್ಯರಾದ ಜನಾರ್ದನ ಚಂಡ್ತಿಮಾರ್, ಗಂಗಾಧರ, ಸಿದ್ಧೀಕ್ ಗುಡ್ಡೆಯಂಗಡಿ, ಬಂಟ್ವಾಳ ಕ್ಷೇತ್ರ ಸಾಮಾಜಿಕ ಜಾಲತಾಣ ಪ್ರಮುಖರಾದ ಉಮ್ಮರ್ ಕುಂಞ ಸಾಲೆತ್ತೂರು, ಪ್ರಮುಖರಾದ ವೆಂಕಪ್ಪ ಪೂಜಾರಿ, ಸಿದ್ದೀಕ್ ಸರವು, ಪ್ರಶಾಂತ್ ಕುಲಾಲ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು,
| ಸಾಹಿತ್ಯದಿಂದ ಸಾಮರಸ್ಯ ಆಶಯ | ಎರಡು ದಿನ ವಿಚಾರ ಮಂಡನೆ, ಸಾಂಸ್ಕೃತಿಕ ಕಾರ್ಯಕ್ರಮ (more…)