ಪುಂಜಾಲಕಟ್ಟೆ

ಪಿಲಾತಬೆಟ್ಟು ವ್ಯ.ಸೇ.ಸ.ಸಂಘದ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು, ಸಿಬ್ಬಂದಿಗೆ ಸನ್ಮಾನ

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕು ಪುಂಜಾಲಕಟ್ಟೆಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ  ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಆರೋಗ್ಯ ಸಿಬಂದಿಯನ್ನು ಗುರುವಾರ ಪ್ರಾ.ಆ.ಕೇಂದ್ರದಲ್ಲಿ ಸನ್ಮಾನಿಸಲಾಯಿತು.

ಸಂಘದ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣ ಉಡುಪ ಸನ್ಮಾನಿಸಿ ಮಾತನಾಡಿ, ಸಮಾಜದ  ಜನರ ಆರೋಗ್ಯ ರಕ್ಷಣೆಗಾಗಿ ತಮ್ಮನ್ನು ಸಮರ್ಪಿಸಿಕೊಳ್ಳುವ ವೈದ್ಯರು, ಸಿಬ್ಬಂದಿ ಸೇವೆ ಅಮೂಲ್ಯ ಎಂದರು. ಪ್ರಾ.ಆ.ಕೇಂದ್ರದ ವೈದ್ಯಾಧಿಕಾರಿ ಡಾ. ಸತೀಶ್ ಎಂ. ಸಿ. ಅವರು ಮಾತನಾಡಿ, ಕೊರೊನಾ ಸಂದಿಗ್ದ ಪರಿಸ್ಥಿತಿಯಲ್ಲಿ  ತಂಡವಾಗಿ ಕಾರ್ಯ ನಿರ್ವಹಿಸಿ, ಕೊರೊನಾ ಹಿಮ್ಮೆಟ್ಟಿಸುವಲ್ಲಿ ಆರೋಗ್ಯ ಕೇಂದ್ರದ ಸಿಬಂದಿಗಳು ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದರು.ಆಯುಷ್ ವೈದ್ಯಾಧಿಕಾರಿ ಡಾ, ಸೋಹನ್ ಕುಮಾರ್, ಪ್ರಾ. ಆ.ಕೇಂದ್ರದ ವೈದ್ಯರ ಸಹಿತ ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕಿಯರು, ವಾಹನ ಚಾಲಕರು, ಪ್ರಯೋಗಾಲಯ ಸಿಬಂದಿ, ಇತರ ವಿಭಾಗದ ಒಟ್ಟು 20 ಮಂದಿ ಕೊರೋನಾ ವಾರಿಯರ್ ಗಳನ್ನು ಗೌರವಿಸಲಾಯಿತು. ಪಿಲಾತಬೆಟ್ಟು ಗ್ರಾ. ಪಂ ಅಧ್ಯಕ್ಷೆ, ಸಂಘದ ನಿರ್ದೇಶಕಿ ಹರ್ಷಿಣಿ ಪುಷ್ಪಾನಂದ, ಸಂಘದ ಉಪಾಧ್ಯಕ್ಷ ಉಮೇಶ್ ಪೂಜಾರಿ, ನಿರ್ದೇಶಕರಾದ ಬೂಬ ಸಪಲ್ಯ, ಸುಂದರ ನಾಯ್ಕ, ಸೀತಾರಾಮ ಶೆಟ್ಟಿ ಸೇವಾ, ಸಂತೋಷ್ ಕುಮಾರ್ ಶೆಟ್ಟಿ, ನಾರಾಯಣ ಪೂಜಾರಿ, ಚಂದ್ರಶೇಖರ ಹೆಗ್ಡೆ,   ದಿನೇಶ್ ಮೂಲ್ಯ, ಶಿವಯ್ಯ, ಸಿಬಂದಿಗಳಾದ ಬಬಿತಾ, ದೀಕ್ಷಿತ್ ಉಪಸ್ಥಿತರಿದ್ದರು. ನಿರ್ದೇಶಕ ಪಿ.ಎಂ.ಪ್ರಭಾಕರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಂಜಪ್ಪ ಮೂಲ್ಯ ವಂದಿಸಿದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ