ಬಂಟ್ವಾಳ

ಬಂಟ್ವಾಳ ಪುರಸಭೆ 13ನೇ ವಾರ್ಡ್ ಕೋವಿಡ್ ಕಾರ್ಯಪಡೆ ಸಭೆ

ಬಂಟ್ವಾಳ: ಬಂಟ್ವಾಳ ಪುರಸಭೆಯ ಗೂಡಿನಬಳಿಯ 13ನೇ ವಾರ್ಡ್ ನ ಕೋವಿಡ್ ಕಾರ್ಯಪಡೆ ಸಭೆ ಟಾಸ್ಕ್ ಫೊರ್ಸ್ ಸಮಿತಿ ಅಧ್ಯಕ್ಷರೂ ಆಗಿರುವ ವಾರ್ಡ್ ಸದಸ್ಯೆ ಸಂಶಾದ್ ಬಾನು ಅಧ್ಯಕ್ಷತೆಯಲ್ಲಿ ಗೂಡಿನಬಳಿಯಲ್ಲಿ ನಡೆಯಿತು.

ಈ ಸಂದರ್ಭ ಪುರಸಭೆಯ ಆರೋಗ್ಯ ನಿರೀಕ್ಷಕ ಜಯಶಂಕರ ಪ್ರಸಾದ್, ಪುರಸಭೆ ವತಿಯಿಂದ ಕೋವಿಡ್ ನಿರ್ಮೂಲನೆ ಕುರಿತು ಕೈಗೊಂಡ ಕ್ರಮಗಳ ಕುರಿತು ತಿಳಿಸಿ, ಟಾಸ್ಕ್ ಫೋರ್ಸ್ ನ ಕಾರ್ಯವೈಖರಿ ಕುರಿತು ಮಾಹಿತಿ ನೀಡಿದರು. ಪುರಸಭೆ ಕಂದಾಯ ನಿರೀಕ್ಷಕ ಪುರುಷೋತ್ತಮ ಇಲಾಖೆ ವಿಚಾರ ತಿಳಿಸಿದರು. ಈ ಸಂದರ್ಭ ಕೈಕಂಬದ ಸಂಚಾರಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ ರೋಗಲಕ್ಷಣ ಹಾಗೂ ಮುಂಜಾಗರೂಕತೆ ಕುರಿತು ತಿಳಿಸಿದರು. ಸಭೆಯಲ್ಲಿ ಆಶಾ ಕಾರ್ಯಕರ್ತೆ ಶ್ವೇತಾ, ಅಂಗನವಾಡಿ ಕಾರ್ಯಕರ್ತೆ ನೇತ್ರಾ, ಪೊಲೀಸ್ ಸಿಬ್ಬಂದಿ ಬಸವರಾಜ್, ಪ್ರಮುಖರಾದ ಪುರಸಭೆ ಮಾಜಿ ಉಪಾಧ್ಯಕ್ಷ ಇಕ್ಬಾಲ್ ಐಎಂಆರ್, ಮುಬಾರಕ್, ಆಲೀಮ್ ಗೂಡಿನಬಳಿ, ನಿಶರ್ ಅಹಮದ್, ರಝಾಕ್ ಟಿ, ಫಾರೂಕ್ ಎಂ.ಕೆ, ಅನ್ಸಾರ್ ಎಂ.ಕೆ. ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ