ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂಧನ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

ಮಹಿಳಾ ಕಾಂಗ್ರೆಸ್ ವತಿಯಿಂದ ಮೆಲ್ಕಾರ್ ನಲ್ಲಿ ಪ್ರತಿಭಟನೆ

ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ಮಾರ್ಗದರ್ಶನದಲ್ಲಿ ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಬಿ.ಸಿ.ರೋಡಿನಲ್ಲಿ ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ನಡೆಯಿತು.ಪ್ರಮುಖರಾದ ಚಂದ್ರಪ್ರಕಾಶ ಶೆಟ್ಟಿ, ಎಂ.ಎಸ್.ಮಹಮ್ಮದ್, ಪದ್ಮನಾಭ ರೈ, ಅಲ್ಬರ್ಟ್ ಮೇನಿಜಸ್, ಬಾಲಕೃಷ್ಣ ಆಳ್ವ, ಪ್ರಶಾಂತ್ ಕುಲಾಲ್, ಶೋಭಿತ್ ಪುಂಜಾ, ಮಧುಸೂದನ್ ಶಣೈ, ಮಹಮದ್  ನಂದಾವರ, ಸಿದ್ದಿಕ್ ಸರವು, ವಲಯ ಕಾಂಗ್ರೆಸ್ ಅಧ್ಯಕ್ಷರುಗಳು ಗ್ರಾಮ ಪಂಚಾಯತ್ ಸದಸ್ಯರುಗಳು  ಉಪಸ್ಥಿತರಿದ್ದರು. ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವರಾದ ಬಿ.ರಮನಾಥ ರೈ ಮಾರ್ಗದರ್ಶನದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯ ವಿರುದ್ದವಾಗಿ 100 ನಾಟೌಟ್ ಪ್ರತಿಭಟನಾ ಕಾರ್ಯಕ್ರಮ  ಮೇಲ್ಕಾರ್ ಎಚ್.ಪಿ ಪೆಟ್ರೋಲ್ ಪಂಪ್ ನ ಮುಂಬಾಗ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ನೇತೃತ್ವದಲ್ಲಿ ನಡೆಯಿತು.ಮಾಜಿ ಸಚಿವ ಬಿ.ರಮನಾಥ ರೈ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಹಾಗೂ ತೈಲಬೆಲೆಗಳ ಏರಿಕೆಯನ್ನು ಖಂಡಿಸಿದರು. ಈ ಸಂದರ್ಭ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಮಲ್ಲಿಕಾ ವಿ ಶೆಟ್ಟಿ. ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯರಾದ  ಜಾಸ್ಮಿನ್ ಡಿ ಸೋಜ . ಕೆಪಿಸಿಸಿ ಮಾಜಿ ಸದಸ್ಯರಾದ ಐಡಾ ಸುರೇಶ್. ಪುರಸಭಾ ಉಪಾಧ್ಯಕ್ಷರಾದ  ಜೆಸಿಂತಾ ಡಿಸೋಜ, ತಾಪಂ ಮಾಜಿ ಸದಸ್ಯರಾದ ಮಂಜುಳಾ ಕುಶಲ. ಗಾಯತ್ರಿ ರವೀಂದ್ರ ಸಫಲ್ಯ ಸ್ವಪ್ನಾ ಮತ್ತಿತರರು ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂಧನ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*