ಬಂಟ್ವಾಳ: ಶನಿವಾರ ದಿನವಿಡೀ ಮಳೆಯಾಗಿದ್ದು, ಬಂಟ್ವಾಳದ ಹಲವೆಡೆ ರಸ್ತೆ ಪಕ್ಕದ ಹೊಂಡಗಳಲ್ಲಿ ನೀರು ನಿಂತಿರುವುದು ಕಂಡುಬಂತು. ಸಂಜೆ ಬೀಸಿದ ಭಾರಿ ಗಾಳಿಗೆ ಬಂಟ್ವಾಳ ತಾಲೂಕಿನ ಪುರಸಭಾ ವ್ಯಾಪ್ತಿಯಲ್ಲಿನ ಬಿ.ಮೂಡ ಗ್ರಾಮದ ಮೈರಾನ್ ಪಾದೆ ಎಂಬಲ್ಲಿ ಮನೆಯೊಂದಕ್ಕೆ ಮರ ಬಿದ್ದು ಹಾನಿಯಾಗಿದೆ. ಪಕೀರ ಎಂಬವರ ಮಗ ಬೇಬಿ ಎಂಬವರ ಮನೆಗೆ ಹಾನಿಯಾಗಿದ್ದು, ಘಟನಾ ಸ್ಥಳಕ್ಕೆ ಘಟನಾ ಸ್ಥಳಕ್ಕೆ ಬಿ.ಮೂಡ ಗ್ರಾಮ ಲೆಕ್ಕಾಧಿಕಾರಿ ನಾಗರಾಜ್, ಸ್ಥಳಿಯ ಪುರಸಭಾ ಸದಸ್ಯ ಹರಿಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳದಲ್ಲಿ ದಿನವಿಡೀ ಮಳೆ, ರಸ್ತೆಪಕ್ಕದ ಹೊಂಡಗಳಲ್ಲಿ ನೀರು, ಮನೆಯೊಂದಕ್ಕೆ ಮರ ಬಿದ್ದು ಹಾನಿ"