ಬಂಟ್ವಾಳ: ಮಾಣಿ ಸಮೀಪದ ಪೆಟ್ರೋಲ್ ಪಂಪ್ ಗಳಲ್ಲಿ ತೈಲ ಬೆಲೆ ಏರಿಕೆ ವಿರುದ್ಧ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಸೂರಿಕುಮೇರು ಮತ್ತು ದಾಸಕೋಡಿಯ ಎರಡು ಪೆಟ್ರೋಲ್ ಪಂಪ್ ಗಳಲ್ಲಿ ಪ್ರತಿಭಟನೆ ನಡೆದಿದ್ದು, ಮಾಜಿ ಸಚಿವ ಬಿ ರಮಾನಾಥ ರೈ ಮಾತನಾಡಿ ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರಗೈದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿಯವರ ಮುಂದಾಳತ್ವದಲ್ಲಿ ಜರಗಿದ ಈ ಪ್ರತಿಭಟನೆಯಲ್ಲಿ ಮಾಣಿ ಗ್ರಾಮ ಪಂಚಾಯತ್ ಮತ್ತು ವಲಯ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಕಡೇಶಿವಾಲಯ ವಲಯ ಕಾಂಗ್ರೆಸ್ ಅಧ್ಯಕ್ಷ ಹರಿಶ್ಚಂದ್ರ, ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ ರೈ, ಬರಿಮಾರು ವಲಯ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಬರಿಮಾರು, ಅನಂತಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಬಾಕಿಲ, ಬಾಳ್ತಿಲ ವಲಯ ಕಾಂಗ್ರೆಸ್ ಅಧ್ಯಕ್ಷ ರಾಮಣ್ಣ ಪೂಜಾರಿ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ ಕೋರ್ಯ, ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ ಬಾಕಿಲ, ಸೂರಿಕುಮೇರು ಜುಮ್ಮಾ ಮಸೀದಿ ಅಧ್ಯಕ್ಷ ಮೂಸಾ ಕರೀಂ, ನೇರಳಕಟ್ಟೆ ಸಹಕಾರಿ ವ್ಯವಸಾಯಿಕ ಸೇವಾ ಸಂಘದ ನಿರ್ದೇಶಕ ನಿರಂಜನ್ ರೈ ಕುರ್ಲೆತ್ತಿಮಾರು, ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ.ಡಿ.ಪೂಜಾರಿ, ಸೀತಾ, ಪ್ರಮುಖರಾದ ಅಬ್ದುಲ್ ಅಜೀಜ್, ರಝಾಕ್ ಕೋರ್ಯ, ರಶೀದ್ ಕೋರ್ಯ ಮತ್ತಿತರರು ಉಪಸ್ಥಿತರಿದ್ದರು.