ಬುಧವಾರ ಸಂಜೆ ಸುಮಾರು 4 ಗಂಟೆ ವೇಳೆಗೆ ಬೀಸಿದ ಭಾರೀ ಗಾಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡೇಶಿವಾಲಯ ಗ್ರಾಮದ ಸಂಪೋಳಿ ಎಂಬಲ್ಲಿ ಬೃಹತ್ ಗಾತ್ರದ ಗೋಳಿಮರವೊಂದು ಧರೆಗುರುಳಿದೆ.
ಬುಡಸಮೇತ ಉರುಳಿದ ಮರ ರಸ್ತೆಗೆ ಉರುಳಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಸಮೀಪದಲ್ಲೇ ಇದ್ದ ಐದಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿವೆ. ಮರದ ಪಕ್ಕದಲ್ಲೇ ನಾಲ್ಕೈದು ಮನೆಗಳು ಇದ್ದವು. ಯಾವುದೇ ಮನೆಗಳಿಗೆ ಹಾನಿಯಾಗಿಲ್ಲ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಭಾರಿ ಗಾಳಿಗೆ ಉರುಳಿದ ಮರ, ಐದು ವಿದ್ಯುತ್ ಕಂಬಗಳಿಗೆ ಹಾನಿ"