ಬಂಟ್ವಾಳ

ತೈಲಬೆಲೆ ಏರಿಕೆ: ಕಾರು, ಬೈಕ್ ತಳ್ಳಿಕೊಂಡು ಹೋಗುವ ಮೂಲಕ ಪ್ರತಿಭಟನೆ ನಡೆಸಿದ ಎಸ್.ಡಿ.ಪಿ.ಐ.

ಬಂಟ್ವಾಳ: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಜಿಪ ಮೂಡ ಮತ್ತು ಮುನ್ನೂರು ಗ್ರಾಮ ಸಮಿತಿ ವತಿಯಿಂದ ಕೇಂದ್ರ ಸರಕಾರ ತೈಲಬೆಲೆ ಏರಿಕೆ ವಿರುದ್ದ ಬೆಂಕ್ಯ ಜಂಕ್ಷನ್ ನಲ್ಲಿ ಕಾರ್ ಮತ್ತು ದ್ವಿಚಕ್ರ ವಾಹನನ್ನು ತಳ್ಳುವ ಮೂಲಕ ಪ್ರತಿಭ ಟನೆ ನಡೆಯಿತು. ಪ್ರತಿಭಟನೆಯ ಅಧ್ಯಕ್ಷತೆಯನ್ನು ಗ್ರಾಮ ಸಮಿತಿ ಅಧ್ಯಕ್ಷರಾದ ಫಾರೂಕ್ ಅಲಾಡಿ ವಹಿಸಿದ್ದರು. ಪ್ರಾಸ್ತಾವಿಕವಾಗಿ ಗ್ರಾಮ ಸಮಿತಿ ಸದಸ್ಯ ರಾದ ಮುಬಾರಕ್ ಕಾರಜೆ ಮಾತಾಡಿದರು. ಮುಖ್ಯ ಅತಿಥಿಯಾಗಿ ಸಜಿಪ ಮುನ್ನೂರು  ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸಬೀನ ಹಮೀದ್ ಸಭೆಯನ್ನು ಉದ್ದೇಶಿಸಿ ಕೋವಿಡ್ ಮಹಾ ಮಾರಿ ಸಂದರ್ಭದಲ್ಲಿ ಸರ್ಕಾರದ ವೈಫಲ್ಯ ಮತ್ತು ಬೆಲೆ ಏರಿಕೆ ವಿಚಾರದಲ್ಲಿ  ಮಾತಾಡಿದರು. ಈ ಸಂದರ್ಭ ಪಂಚಾಯತ್ ಸದಸ್ಯೆಯಾದ ನೌರೀನ್ ಸಲೀಂ, ಕ್ಷೆತ್ರ ಸಮಿತಿ ಜೊತೆ ಕಾರ್ಯದರ್ಶಿ ಸಲೀಂ ಅಲಾಡಿ, ಎಸ್ ಡಿ ಟಿ ಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲಿಕ್ ಕೊಳಕೆ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಮಜೀದ್ ಅಲಾಡಿ, ಶರೀಫ್ ಕೊಪ್ಪಳ ಹಮೀದ್ ನಂದವಾರ,ಉಪಸ್ಥಿತರಿದ್ದರು. ಸಲೀಂ ಅಲಾಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ