ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನೀಡಲ್ಪಡುವ ಉಚಿತ ಲಸಿಕಾ ಶಿಬಿರ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ಮನೆ ಮನೆಗೆ ಬಂದು ಲಸಿಕೆ ನೀಡಲು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ,ರೋಟರಿ ಮಂಗಳೂರು ಹಾಗೂ ಬ್ಯಾಂಕ್ ಆಫ್ ಬರೋಡಾ ಇವರ ಸಹಯೋಗದೊಂದಿಗೆ ಆರೋಗ್ಯ ಕಾರ್ಯಕರ್ತರು ಮನೆಮನೆಗೆ ಬಂದು ಲಸಿಕೆ ಹಾಕಲಿರುವರು.ಹೀಗಾಗಿ ಜಿಲ್ಲಾಡಳಿತದ ಅಧಿಕೃತ ವೆಬ್ ಸೈಟ್ dk.nic.in ನಲ್ಲಿ ನೊಂದಾಯಿಸಲು ಕೋರಲಾಗಿದೆ.ನೊಂದಾವಣೆಯಾದ ಬಳಿಕ ದಿನ ನಿಗದಿಪಡಿಸಿ ಮನೆ ಮನೆಗೆ ಬಂದು ಲಸಿಕೆ ನೀಡಲಾಗುವುದು.
ಮನೆ ಮನೆ ಲಸಿಕಾ ವಾಹನಕ್ಕೆ ದಿನಾಂಕ 19-6-2021 ರಂದು ಬೆಳಿಗ್ಗೆ 9.30 ಕ್ಕೆ ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಯುನಿವರ್ಸಿಟಿ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಲಾಗುವುದು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಶಕ್ತರ ನಿವಾಸಕ್ಕೆ ತೆರಳಿ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧಾರ"
Be the first to comment on "ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಶಕ್ತರ ನಿವಾಸಕ್ಕೆ ತೆರಳಿ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧಾರ"