ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 19ರ ಶನಿವಾರ ಜಿಲ್ಲಾಡಳಿತ ಹೊರಡಿಸಿದ ಅಧಿಕೃತ ಪ್ರಕಟಣೆಯಂತೆ ಒಟ್ಟು 832 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ತಗಲಿದ್ದು, ಪಾಸಿಟಿವಿಟಿ ರೇಟ್ ಶೇ.7.96 ಆಗಿದೆ. 552 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 16 ಮಂದಿ ಶನಿವಾರ ಸಾವನ್ನಪ್ಪಿರುವುದಾಗಿ ಪ್ರಕಟಣೆ ತಿಳಿಸಿದೆ. ಇಂದಿನ ಮಟ್ಟಿಗೆ 7195 ಸಕ್ರಿಯ ಪ್ರಕರಣಗಳು ಇವೆ. ಬಂಟ್ವಾಳ ತಾಲೂಕಿನಲ್ಲಿ ಇವತ್ತು 130 ಮಂದಿಗೆ ಸೋಂಕು ತಗಲಿದ್ದು, 117 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ. 5 ಮಂದಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "COVIDUPDATE: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 832 ಮಂದಿಗೆ ಸೋಂಕು, 16 ಸಾವು, 552 ಗುಣಮುಖ"