ವಿಟ್ಲಕ್ಕೆ ಪ್ರವೇಶಿಸುವವರ ಕೋವಿಡ್ ಪರೀಕ್ಷೆಯಲ್ಲಿ ಎಲ್ಲರೂ ಪಾಸ್: ತಪಾಸಣೆ ಮಾಡಿದ ಎಲ್ಲ 212 ಮಂದಿ ರಿಪೋರ್ಟ್ ನೆಗೆಟಿವ್

Photo: ಶಿಲ್ಪಿ ವಿಟ್ಲ

ವಿಟ್ಲ ಪಟ್ಟಣ ಪಂಚಾಯಿತಿ ನಿರ್ಣಯದಂತೆ ವಿಟ್ಲ ಪೇಟೆಗೆ ಆಗಮಿಸುವ ಜನರ  ಕೋವಿಡ್ ಪರೀಕ್ಷೆ ಮಾಡಿದ ಸಂದರ್ಭ ಎರಡು ದಿನಗಳಲ್ಲಿ ತಪಾಸಣೆ ಮಾಡಿದ ಎಲ್ಲ 212 ಮಂದಿಯ ರಿಪೋರ್ಟ್ ನೆಗೆಟಿವ್ ಬಂದಿದೆ. ಎರಡನೇ  ದಿನ ಪರೀಕ್ಷೆಗೊಳಪಟ್ಟ 132  ಮಂದಿಯಲ್ಲಿ ಎಲ್ಲವೂ ನೆಗೆಟಿವ್ ವರದಿ ಬಂದಿದ್ದರೆ, ಮೊದಲ ದಿನ ತಪಾಸಣೆ ಮಾಡಿದ 80 ಮಂದಿಯ ವರದಿಯೂ ನೆಗೆಟಿವ್ ಬಂದಿತ್ತು.  ವಿಟ್ಲದಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕು ಹರಡುತ್ತಿದ್ದು, ಅವುಗಳನ್ನು ನಿಯಂತ್ರಿಸಲು ಪೇಟೆಗೆ ಬರುವ ಪ್ರತಿಯೊಬ್ಬರನ್ನು ಪರೀಕ್ಷೆಗೊಳಪಡಿಸಬೇಕೆಂದು ಹಾಗೂ ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲು ಪಟ್ಟಣ ಪಂಚಾಯಿತಿ ನಿರ್ಣಯ ಕೈಗೊಂಡಿತ್ತು. ವಿಟ್ಲ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ, ನಾಡಕಚೇರಿ, ಮೇಗಿನಪೇಟೆ ಮೂರು ಕಡೆಗಳಲ್ಲಿ ವಿಟ್ಲ ಸಮುದಾಯ ಆರೋಗ್ಯದ ಕೇಂದ್ರದ ಮತ್ತು ಅಳಿಕೆಯ ಸಿಬ್ಬಂದಿಗಳು ಕೋವಿಡ್ ಪರೀಕ್ಷೆ ನಡೆಸಿದ್ದರು. ಪ್ರಥಮ ದಿನ ಗುರುವಾರ  ವಿಟ್ಲ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಕಾಸರಗೋಡು ರಸ್ತೆ ಮೂಲಕ ಪೇಟೆಗೆ ಬರುವ  ಒಟ್ಟು ೮೦ ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಅದು ಎಲ್ಲವೂ ನೆಗೆಟಿವ್ ಬಂದಿತ್ತು.  ಶುಕ್ರವಾರ ೧೩೨ ಮಂದಿ ಪರೀಕ್ಷೆ ನಡೆಸಲಾಗಿತ್ತು. ಎಲ್ಲವೂ ನೆಗೆಟಿವ್ ವರದಿ ಬಂದಿದೆ. ಒಟ್ಟು ನಡೆಸಲಾದ  ೨೧೨ ಮಂದಿಯ ಸ್ಲ್ಯಾಬ್ ಪರೀಕ್ಷೆಯಲ್ಲಿ ಎಲ್ಲವೂ ನೆಗೆಟಿವ್ ಬಂದಿದೆ.ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ನಡೆಸಲಾದ ಕೊರೊನಾ ಪರೀಕ್ಷೆಯಲ್ಲಿ ಇಂದು ಒಂದೇ ದಿನ 18 ಪಾಸಿಟಿವ್ ಪತ್ತೆಯಾಗಿದೆ. ವಿಟ್ಲದಲ್ಲಿ ಒಟ್ಟು 84 ಸಕ್ರಿಯ ಪ್ರಕರಣಗಳಿವೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ವಿಟ್ಲಕ್ಕೆ ಪ್ರವೇಶಿಸುವವರ ಕೋವಿಡ್ ಪರೀಕ್ಷೆಯಲ್ಲಿ ಎಲ್ಲರೂ ಪಾಸ್: ತಪಾಸಣೆ ಮಾಡಿದ ಎಲ್ಲ 212 ಮಂದಿ ರಿಪೋರ್ಟ್ ನೆಗೆಟಿವ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*