ಬಂಟ್ವಾಳ: ಬಂಟ್ವಾಳ ಸರ್ಕಾರಿ ಆಸ್ಪತ್ರೆ ಮತ್ತಷ್ಟು ಅಭಿವೃದ್ಧಿಗೊಳಿಸಿ, ಸುಸಜ್ಜಿತವಾಗಿಸುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ಜೊತೆ ಸೋಮವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಸಮಾಲೋಚನೆ ನಡೆಸಿದರು.
ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ಸಂಬಂಧಿಸಿ ತೊಂದರೆಗಳಾದಾಗ ಬಂಟ್ವಾಳದಲ್ಲಿ ಪರಿಪೂರ್ಣ ಹಾಗೂ ಸುಸಜ್ಜಿತ ವ್ಯವಸ್ಥೆಗಳುಳ್ಳ ಆಸ್ಪತ್ರೆಯನ್ನಾಗಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯನ್ನು ನವೀಕರಿಸುವ ಕುರಿತು ಡಿಎಚ್ ಒ ಜೊತೆ ಶಾಸಕ ರಾಜೇಶ್ ನಾಯ್ಕ್ ಚರ್ಚಿಸಿದರು. ಈ ಸಂದರ್ಭ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಪುಷ್ಪಲತಾ ಮತ್ತು ಆಸ್ಪತ್ರೆಯ ವೈದ್ಯರು ಹಾಜರಿದ್ದು ಪೂರಕ ಮಾಹಿತಿ ನೀಡಿದರು. ಶಾಸಕರ ಜೊತೆಗೆ ಬುಡಾ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ವಾರ್ ರೂಮ್ ಪ್ರಮುಖರಾದ ದೇವಪ್ಪ ಪೂಜಾರಿ, ಪುರುಷೋತ್ತಮ ಶೆಟ್ಟಿ ವಾಮದಪದವು ಮತ್ತಿತರರು ಉಪಸ್ಥಿತರಿದ್ದರು.