ಬಂಟ್ವಾಳ: ಬಂಟ್ವಾಳ ತಾಲೂಕಿನ ಪೊಲೀಸ್ ಸಿಬ್ಬಂದಿಯ ಕುಟುಂಬದ ಸದಸ್ಯರಿಗೆ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಸೋಮವಾರ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಕೊರೊನಾ ವಾರಿಯರ್ ಗಳಾದ ಪೊಲೀಸ್ ಸಿಬ್ಬಂದಿ ಹಗಲು ರಾತ್ರಿ, ಕೆಲಸ ಮಾಡುತ್ತಿದ್ದು, ಅವರ ಕುಟುಂಬಕ್ಕೆ ಲಸಿಕೆಯ ರಕ್ಷಣೆ ಅಗತ್ಯ ಎಂದರು. ಸುಮಾರು 150 ಮಂದಿ ಪೊಲೀಸ್ ಕುಟುಂಬದ ಸದಸ್ಯರು ಲಸಿಕೆ ಪಡೆದುಕೊಂಡರು. ಈ ಸಂದರ್ಭ ಡಿವೈಎಸ್ಪಿ ವೆಲಂಟೈನ್ ಡಿಸೋಜ, ಇನ್ಸ್ ಪೆಕ್ಟರ್ ಗಳಾದ ಚಲುವರಾಜ್, ಟಿ.ಡಿ.ನಾಗರಾಜ್, ಎಸ್ಸೈಗಳಾದ ಪ್ರಸನ್ನ, ಅವಿನಾಶ್, ರಾಜೇಶ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಬುಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Be the first to comment on "ಬಂಟ್ವಾಳ ಪೊಲೀಸ್ ಕುಟಂಬ ಸದಸ್ಯರಿಗೆ ಲಸಿಕಾ ಅಭಿಯಾನ ಕಾರ್ಯಕ್ರಮ"