ಬಂಟ್ವಾಳ: ಬಂಟ್ವಾಳ ತಾಲೂಕಿನ ಪೊಲೀಸ್ ಸಿಬ್ಬಂದಿಯ ಕುಟುಂಬದ ಸದಸ್ಯರಿಗೆ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಸೋಮವಾರ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಕೊರೊನಾ ವಾರಿಯರ್ ಗಳಾದ ಪೊಲೀಸ್ ಸಿಬ್ಬಂದಿ ಹಗಲು ರಾತ್ರಿ, ಕೆಲಸ ಮಾಡುತ್ತಿದ್ದು, ಅವರ ಕುಟುಂಬಕ್ಕೆ ಲಸಿಕೆಯ ರಕ್ಷಣೆ ಅಗತ್ಯ ಎಂದರು. ಸುಮಾರು 150 ಮಂದಿ ಪೊಲೀಸ್ ಕುಟುಂಬದ ಸದಸ್ಯರು ಲಸಿಕೆ ಪಡೆದುಕೊಂಡರು. ಈ ಸಂದರ್ಭ ಡಿವೈಎಸ್ಪಿ ವೆಲಂಟೈನ್ ಡಿಸೋಜ, ಇನ್ಸ್ ಪೆಕ್ಟರ್ ಗಳಾದ ಚಲುವರಾಜ್, ಟಿ.ಡಿ.ನಾಗರಾಜ್, ಎಸ್ಸೈಗಳಾದ ಪ್ರಸನ್ನ, ಅವಿನಾಶ್, ರಾಜೇಶ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಬುಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.