ವಿಟ್ಲ

ಬಾಲಕಾರ್ಮಿಕತೆ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ಮನವಿ

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಆಯೋಜಿಸಿರುವಂಥ “ಬಾಲಕಾರ್ಮಿಕತೆ ನಿಲ್ಲಿಸಿ, ಶಿಕ್ಷಣ ಒದಗಿಸಿ. ಅಭಿಯಾನದ ಭಾಗವಾಗಿ ವಿಟ್ಲ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇದದ ಭಾಗವಾಗಿ ಕೊಳ್ನಾಡು, ವಿಟ್ಲ ಪಡ್ನೂರು, ಕೊಡಂಗಾಯಿ, ವಿಟ್ಲ ಮುಡ್ನೂರು, ಗೋಳ್ತಮಜಲು, ಮಂಚಿ, ಸಜಿಪ ನಡು, ಸಜಿಪ ಮೂಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿಯನ್ನು ನೀಡಲಾಯಿತು. ಗ್ರಾಮದಲ್ಲಿರುವ ಪ್ರತಿಯೊಂದು ವಿದ್ಯಾರ್ಥಿ ಕೂಡ ಶಿಕ್ಷಣದಿಂದ ವಂಚಿತರಾಗಬಾರದು , ಬಾಲ ಕಾರ್ಮಿಕತೆಗೆ ಒಳಗಾದ ಮಕ್ಕಳಿದ್ದರೆ ಅವರಿಗೆ ಶಿಕ್ಷಣ ಒದಗಿಸುವ ಯೋಜನೆಯನ್ನು ಸರ್ಕಾರ ರೂಪಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.  ಕ್ಯಾಂಪಸ್ ಫ್ರಂಟ್ ಉಪಾಧ್ಯಕ್ಷ ಸಂಶುದ್ದೀನ್ ಮತ್ತುh ಉಪಾಧ್ಯಕ್ಷರಾದ ಇರ್ಶಾದ್ ಮತ್ತು ಸಮಿತಿ ಸದಸ್ಯರಾದ ಮುಕ್ತಾರ್, ನಾಸಿರ್ ಮತ್ತು ಯುನಿಟ್ ನಾಯಕರಾದಂತಹ ನಿಹಾಲ್, ಮಕ್ಶಿದ್, ಅನ್ವರ್, ಜಾಫರ್, ಮತ್ತು  ಸದಸ್ಯರು ಉಪಸ್ಥಿತರಿದ್ಧರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ