ಬಂಟ್ವಾಳ: ಕಾಲೇಜು ವಿದ್ಯಾರ್ಥಿಗಳಿಗೆ ಬಂಟ್ವಾಳ ತಾಲೂಕಿನಲ್ಲಿ ನಡೆಯುವ ಮೆಗಾ ವ್ಯಾಕ್ಸಿನೇಶನ್ ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನಲ್ಲಿ ಸೋಮವಾರ ಚಾಲನೆ ನೀಡಿದರು.
ಬಂಟ್ವಾಳ ತಾಲೂಕಿನ ಅಯಾಯ ಕಾಲೇಜಿನ ವಿದ್ಯಾರ್ಥಿಗಳಿಗೆ ವ್ಯಾಕ್ಸಿನೇಷನ್ ನೀಡುವ ವ್ಯವಸ್ಥೆ ಯನ್ನು ಆರೋಗ್ಯ ಇಲಾಖೆ ವತಿಯಿಂದ ಮಾಡಲಾಗಿದ್ದು ಒಟ್ಟು 5350 ಮಂದಿಗೆ ಲಸಿಕೆ ನೀಡಲಾಗುತ್ತದೆ ಎಂದರು. ತಹಸೀಲ್ದಾರ್ ರಶ್ಮಿ ಎಸ್. ಆರ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ, ಕಾಲೇಜು ಪ್ರಿನ್ಸಿಪಾಲ್ ಡಾ. ಪಾಂಡುರಂಗ ನಾಯಕ್ ಉಪಸ್ಥಿತರಿದ್ದರು.
Be the first to comment on "ಬಂಟ್ವಾಳ ತಾಲೂಕಿನಲ್ಲಿ ಕಾಲೇಜು ವಿದ್ಯಾರ್ಥಿಗಳ ವ್ಯಾಕ್ಸಿನೇಶನ್ ಗೆ ಶಾಸಕ ರಾಜೇಶ್ ನಾಯ್ಕ್ ಚಾಲನೆ"