ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ವತಿಯಿಂದ ಮಾದಕ ವಸ್ತು ವಿರೋಧಿ ದಿನಾಚರಣೆ ನಡೆಯಿತು. ಸೇವಾಂಜಲಿ ಫರಂಗಿಪೇಟೆಯ ಟ್ರಸ್ಟಿ ಕೃಷ್ಣಕುಮಾರ ಪೂಂಜ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಬಾಲಕೃಷ್ಣ ಆಳ್ವ, ಬಿ.ಸಿ.ರೋಡ್ ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ರೊನಾಲ್ಡ್ ಡಿಸೋಜ, ಜಿಲ್ಲೆ ಐದು ತಾಲೂಕುಗಳ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು. ಬಂಟ್ವಾಳ ತಾಲೂಕಿನ ಯೋಜನಾಧಿಕಾರಿ ಜಯಾನಂದ ಸ್ವಾಗತಿಸಿದರು. ದ.ಕ.ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ವಂದಿಸಿದರು. ಬಂಟ್ವಾಳ ವಲಯ ಮೇಲ್ವಿಚಾರಕ ಕೇಶವ ಕೆ. ಕಾರ್ಯಕ್ರಮ ನಿರೂಪಿಸಿದರು.