ಮಂಗಳೂರು: ಕಂದಾಯ ದಿನಾಚರಣೆ ಪ್ರಯುಕ್ತ ಹಸಿರೋತ್ಸವ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲೆಯ ಕಂದಾಯ ಇಲಾಖೆ ನೌಕರರ ಸಂಘ,ಗ್ರಾಮಲೆಕ್ಕಾಧಿಕಾರಿಗಳ ಜಿಲ್ಲಾ ಸಂಘ ಹಾಗೂ ಗ್ರಾಮಸಹಾಯಕರ ಜಿಲ್ಲಾ ಸಂಘ ಆಶ್ರಯದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ ಅವರು ದ.ಕ. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅತೀ ಹೆಚ್ಚು ಆಕ್ಸಿಜನ್ ಉತ್ಪಾದಿಸುವ ರೆಂಜೆ ಸಸಿಯನ್ನು ನೆಡುವ ಮೂಲಕ ಜಿಲ್ಲೆಯಲ್ಲಿ ಹಸಿರೋತ್ಸವ ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಡಾ:ಪ್ರಜ್ಞಾ ಅಮ್ಮೆಂಬಳ, ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರಾದ ಮದನ್ ಮೋಹನ್ ಸಸಿ ನೆಡುವ ಮೂಲಕ ಶುಭಕೋರಿದರು. ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಾನಂದ, ಖಜಾಂಚಿಯಾದ ಪ್ರಸನ್ನ ಪಕ್ಕಳ, ಗ್ರಾಮಲೆಕ್ಕಾಧಿಕಾರಿಗಳ ಜಿಲ್ಲಾ ಸಂಘದ ಗೌರವಾಧ್ಯಕ್ಷರಾದ ಪೂರ್ಣಚಂದ್ರ ತೇಜಸ್ವಿ, ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಗ್ರಾಮಸಹಾಯಕರ ಸಂಘದ ಬಂಟ್ವಾಳ ತಾಲೂಕಿನ ಅದ್ಯಕ್ಷರಾದ ಮೋಹನ್ ದಾಸ್ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಅಧೀಕ್ಷಕರಾದ ದಾದ ಫೈರೋಜ್ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷರಾದ ಮಂಜುನಾಥ ಕೆ ಎಂ ಸ್ವಾಗತಿಸಿದರು ಗ್ರಾಮಲೆಕ್ಕಾಧಿಕಾರಿಗಳ ಜಿಲ್ಲಾ ಅಧ್ಯಕ್ಷರಾದ ಜೆ ಜನಾರ್ಧನ್ ವಂದಿಸಿದರು.