ವಿಟ್ಲ

ಮಂಗಳಪದವು ಬಳಿ ಮೆಡಿಕಲ್ ಕಾಲೇಜ್ ಬಸ್, ಬೈಕ್ ನಡುವೆ ಅಪಘಾತ: ನಾಲ್ವರಿಗೆ ಗಾಯ

ಜಾಹೀರಾತು

ಬಂಟ್ವಾಳ: ಮಡಿಕಲ್ ಕಾಲೇಜಿನ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬಸ್ಸಿನಲ್ಲಿದ್ದ ಮಹಿಳಾ ಸಿಬ್ಬಂದಿ ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳಪದವು ಅನಂತಾಡಿ ರಸ್ತೆಯ ಸುರುಳಿಮೂಲೆ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಮಂಗಳೂರು ಖಾಸಗಿ ಆಸ್ಪತ್ರೆಗೆ ಸೇರಿದ ಬಸ್ಸಿನಲ್ಲಿ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಬಸ್ ರಸ್ತೆ ಬದಿಯ ಪ್ರಪಾತದ ಬಳಿ ಸಿಕ್ಕಿಹಾಕಿಕೊಂಡಿತು. ಘಟನೆಯಲ್ಲಿ ಬಸ್ಸಿನಲ್ಲಿದ್ದ ಮೂವರು ಸ್ಟಾಫ್ ನರ್ಸ್ ಮತ್ತು ಬೈಕ್ ಸವಾರ ಗಾಯಗೊಂಡಿದ್ದಾರೆ. ಎಲ್ಲರನ್ನು ವಿಟ್ಲ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ಸಿನಲ್ಲಿ ಸುಮಾರು 13 ಜನರಿದ್ದು, ಮಂಗಳೂರು ಕಡೆಗೆ ಮಂಗಳಪದವು, ಅನಂತಾಡಿ, ಮಾಣಿ ಕಡೆಯ ಸ್ಟಾಪ್ ನರ್ಸ್ ಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ