ಬಂಟ್ವಾಳ: ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಬಂಟ್ವಾಳಕ್ಕೆ ಶನಿವಾರ ಮಧ್ಯಾಹ್ನ ಭೇಟಿ ನೀಡಿ, ಬಂಟ್ವಾಳದ ನೇತ್ರಾವತಿ ನದಿಗೆ ಜಕ್ರಿಬೆಟ್ಟುವಿನಿಂದ ನರಿಕೊಂಬು ಕಲ್ಯಾರು ವರೆಗಿನ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣದ ಯೋಜನೆಯ ಸಾಧ್ಯಾಸಾಧ್ಯತೆ ಕುರಿತು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರೊಂದಿಗೆ ಸಮಾಲೋಚಿಸಿದರು.
ಜಕ್ರಿಬೆಟ್ಟುವಿನಿಂದ ಕಲ್ಯಾರುವರೆಗೆ ಸೇತುವೆ ಮತ್ತು ಅಣೆಕಟ್ಟು ನಿರ್ಮಾಣದ ಯೋಜನೆ ಇದ್ದು, ಇದು ಅನುಷ್ಠಾನಕ್ಕೆ ಬಂದರೆ, ಪರ್ಯಾಯ ರಸ್ತೆಯೊಂದು ಬಂಟ್ವಾಳ ಹೆದ್ದಾರಿಯಿಂದ ಪುತ್ತೂರು ಕಡೆಗೆ ದೊರಕಲಿದೆ. ಈ ಹಿನ್ನೆಲೆಯಲ್ಲಿ ಇದರ ಕಾರ್ಯಯೋಜನೆ ಕುರಿತು ಸಚಿವರು ಶಾಸಕ ರಾಜೇಶ್ ನಾಯ್ಕ್ ಅವರಿಂದ ಮಾಹಿತಿಯನ್ನು ಪಡೆದುಕೊಂಡರು. ಪುತ್ತೂರು ಶಾಸಕ ಸಂಜೀವ ಮಠಂದೂರು, ಬಂಟ್ವಾಳ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ನೀರಾವರಿ ಇಲಾಖೆ ಇಂಜಿನಿಯರ್ ಶಿವಪ್ರಸನ್ನ, ಬಿಜೆಪಿ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.
Be the first to comment on "ಬಂಟ್ವಾಳಕ್ಕೆ ಸಚಿವ ಮಾಧುಸ್ವಾಮಿ ಭೇಟಿ: ಬ್ರಿಡ್ಜ್ ಕಮ್ ಬ್ಯಾರೇಜ್ ಯೋಜನೆ ಕುರಿತು ಸಮಾಲೋಚನೆ"