ಬಂಟ್ವಾಳ: ಬಂಟ್ವಾಳ ಪುಂಜಾಲಕಟ್ಟೆ ಹೆದ್ದಾರಿ ಅಗಲಗೊಳ್ಳುವ ಕಾರ್ಯದ ಸಂದರ್ಭ ತಮ್ಮ ಜಮೀನು ಸ್ವಾಧೀನಪಡಿಸಿಕೊಂಡಿದ್ದರೂ ಇದುವರೆಗೂ ಪರಿಹಾರ ಬಂದಿಲ್ಲ ಎಂದು ಆರೋಪಿಸಿರುವ ಭೂಮಿ ಕಳೆದುಕೊಂಡವರು, ಜುಲೈ 20ರೊಳಗೆ ಪರಿಹಾರ ಬರದಿದ್ದರೆ ಹೆದ್ದಾರಿಗೆ ಕೊಟ್ಟ ಜಮೀನಿಗೆ ಬೇಲಿ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸಂತ್ರಸ್ತರ ಪರವಾಗಿ ಮಾತನಾಡಿದ ಸಿಪ್ರಿಯನ್ ಸಿಕ್ವೇರಾ ಮತ್ತು ಸದಾನಂದ ನಾವೂರು, ಬಂಟ್ವಾಳ ಪುರಸಭಾ ವ್ಯಾಪ್ತಿ ಸೇರಿದಂತೆ ನಾವೂರು, ಕಾವಳಪುಡೂರು, ಕಾವಳಪಡೂರು, ಪಿಲಾತಬೆಟ್ಟು ಗ್ರಾಪಂ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂಸ್ವಾಧೀನಾಧಿಕಾರಿ ಮೂಲಕ ಹಲವಾರು ಮಂದಿಯ ಭೂಮಿ ಸ್ವಾಧೀನಪಡಿಸಲಾಗಿದ್ದು, ಕಳೆದ ಡಿಸೆಂಬರ್ ನಲ್ಲಿ ಪ್ರತಿ ಭೂಮಾಲೀಕರಿಗೂ ಅವರ ಭೂಮಿಗೆ ನಿಗದಿಪಡಿಸಿದ ಮೊತ್ತವನ್ನು ನಮೂದಿಸಿ ನೋಟಿಸ್ ನೀಡಲಾಗಿತ್ತು. ಆದರೆ ಈವರೆಗೆ ಪರಿಹಾರ ದೊರಕಿಲ್ಲ, ಈ ಬಗ್ಗೆ ಹಲವು ಬಾರಿ ಇಲಾಖಾಧಿಕಾರಿಗಳನ್ನು ಸಂಪರ್ಕಿಸಿದರೂ ಸಕಾರಾತ್ಮಕ ಉತ್ತರ ದೊರಕಿಲ್ಲ ಎಂದರು. ಸುದ್ದಿಗೋಷ್ಠಿಯಲ್ಲಿ ಇಸ್ಮಾಯಿಲ್, ಪವನ್ ಕುಮಾರ್, ಪ್ರಭಾಕರ ಪೂಜಾರಿ, ವಿಲ್ಫ್ರೆಡ್, ರಾಮಚಂದ್ರ ಕುಲಾಲ್, ಜಯರಾಮ್, ಪ್ರವೀಣ್ ರೋಡ್ರಿಗಸ್, ಪ್ರವೀಣ್ ಸೋಮಯಾಜಿ, ಗೋಪಾಲ ಸಫಲ್ಯ, ವಸಂತ ಮೂಲ್ಯ, ನಾರಾಯಣ ಮೂಲ್ಯ, ವೆಂಕಪ್ಪ ಮೂಲ್ಯ, ಮೋಹನ ಬೈಲೋಡಿ ಮೊದಲಾದವರು ಉಪಸ್ಥಿತರಿದ್ದರು.
Be the first to comment on "ಹೆದ್ದಾರಿಗಾಗಿ ಭೂಸ್ವಾಧೀನ ಮಾಡಿದರೂ ಬಾರದ ಪರಿಹಾರ: ಪ್ರತಿಭಟನೆಗೆ ಭೂಮಿ ಕಳೆದುಕೊಂಡವರ ನಿರ್ಧಾರ"