ಸಿದ್ಧಕಟ್ಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ದಕಟ್ಟೆ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಉದ್ಯೋಗ ಭರವಸೆ ಕೋಶಗಳ ಆಶ್ರಯದಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ “How To Become C.A.” ಕುರಿತು ಆನ್ಲೈನ್ ಕಾರ್ಯಗಾರವನ್ನು ನಡೆಸಲಾಯಿತು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಚಾರ್ಟರ್ಡ್ ಅಕೌಂಟೆಂಟ್ ಅನ್ವೇಶ ಶೆಟ್ಟಿ,ಇವರು ಆಗಮಿಸಿ ವಿದ್ಯಾರ್ಥಿಗಳಿಗೆ ಸಿಎ ಆಗುವುದು ಹೇಗೆ ಎಂಬ ವಿಚಾರವನ್ನು ತಿಳಿಸಿದರು. ಬಿಕಾಂ ವಿದ್ಯಾರ್ಥಿಗಳು ತಮ್ಮ ಭವಿಷ್ಯದಲ್ಲಿ ಹೊಂದಿರುವ ಅವಕಾಶಗಳ ಬಗ್ಗೆ ತಿಳಿಸಿದರು. ವಾಣಿಜ್ಯ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇರುವ ಅತ್ಯುತ್ತಮ ಅವಕಾಶಗಳೆಂದರೆ CA, CS ಹಾಗೂ CMA ಎಂಬುದನ್ನು ತಿಳಿಸಿಕೊಟ್ಟರು. ತಮ್ಮ ವೈಯಕ್ತಿಕ ಅನುಭವದ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಕೆಲವು ಕಿವಿಮಾತನ್ನು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲೆ ಸೌಮ್ಯ ಹೆಚ್ಕೆ ವಿದ್ಯಾರ್ಥಿಗಳಿಗೆ CA ಕೋರ್ಸಿನ ಮಹತ್ವವನ್ನು ತಿಳಿಸಿದರು. ವಾಣಿಜ್ಯ ವಿದ್ಯಾರ್ಥಿಗಳು ತಮ್ಮ ಭವಿಷ್ಯದಲ್ಲಿ ಆರಿಸಿಕೊಳ್ಳಬಹುದಾದ ಅತ್ಯುತ್ತಮ ದಾರಿ ಅದು ಚಾರ್ಟರ್ಡ್ ಅಕೌಂಟೆಂಟ್ ಎಂಬುದನ್ನು ಕೆಲವು ನಿದರ್ಶನಗಳ ಆಧಾರದ ಮೇಲೆ ವಿವರಿಸಿದರು.
ಉದ್ಯೋಗ ಭರವಸೆ ಕೋಶದ ಸಂಚಾಲಕರಾದ ಹನುಮಂತಯ್ಯ ಜಿ. ಹೆಚ್. ಸ್ವಾಗತಿಸಿದ ಕಾರ್ಯಕ್ರಮವನ್ನು ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕ ವಿನಯ್ ಎಂ. ಎಸ್. ವಂದಿಸಿದರು. ಪ್ರಜ್ವಲ್ ತೃತೀಯ ಬಿಕಾಂ ಕಾರ್ಯಕ್ರಮ ನಿರೂಪಿಸಿದರು.