ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಬಂಟ್ವಾಳ ತಾಲೂಕಿನ ಬಂಟ್ವಾಳ ಪುರಸಭಾ ವ್ಯಾಪ್ತಿಯ ಕಲ್ಲಗುಡ್ಡೆ ಎಂಬಲ್ಲಿ ಮನೆಯೊಂದರ ಆವರಣಗೋಡೆ ಕುಸಿದಿದ್ದು, ಮನೆಮಂದಿ ಪವಾಡಸದೃಶರಾಗಿ ಪಾರಾಗಿದ್ದಾರೆ.
ಬಂಟ್ವಾಳ ಕಸ್ಬ ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿಯ ಸೋಮನಾಥ ಸಾಲಿಯಾನ್ ಬಿನ್ ಪರಮೇಶ್ವರ ಮೂಲ್ಯ ಎಂಬವರ ಮನೆಗೆ ಪಕ್ಕದ ದರೆ ಕುಸಿದು ಮನೆಗೆ ಹಾನಿಯಾಯಿತು. ಸೋಮನಾಥ ಕುಲಾಲ್ ಎಂಬವರಿಗೆ ಸೇರಿದ ಈ ಮನೆಯನ್ನು ನವೀನ್ ಎಂಬವರಿಗೆ ವಾಸ್ತವ್ಯಕ್ಕಾಗಿ ಬಾಡಿಗೆಗೆ ನೀಡಲಾಗಿತ್ತು. ಅವರು ಪತ್ನಿ ಹಾಗೂ ಮಗಳೊಂದಿಗೆ ವಾಸವಿದ್ದು, ಶುಕ್ರವಾರ ತಡರಾತ್ರಿ ಮನೆಪಕ್ಕದ ತಡೆಗೋಡೆ ಕುಸಿದಿದೆ. ಮನೆಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬುಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಪುರಸಭಾ ಸದಸ್ಯ ಗಂಗಾಧರ್ ಪೂಜಾರಿ, ಗ್ರಾಮಲೆಕ್ಕಾಧಿಕಾರಿ ಪ್ರದೀಪ್ ಕುಲಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…