ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ರೈ ನೇತೃತ್ವದಲ್ಲಿ ಬಂಟ್ವಾಳದಲ್ಲಿ ಪಾದಯಾತ್ರೆ, ಸೈಕಲ್ ಜಾಥಾ

ಬಂಟ್ವಾಳ: ತೈಲ ಬೆಲೆ ಏರಿಕೆಯನ್ನು ಖಂಡಿಸಿ, ಕೇಂದ್ರ ಸರ್ಕಾರದ ನೀತಿಗಳನ್ನು ಟೀಕಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ಮಾರ್ಗದರ್ಶನದಲ್ಲಿ ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್ ಮತ್ತು ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಬಂಟ್ವಾಳ ಬಡ್ಡಕಟ್ಟೆ ಹನುಮಾನ್ ಮಂದಿರದಿಂದ ಬಿ.ಸಿ.ರೋಡಿನವರೆಗೆ ಪಾದಯಾತ್ರೆ ಮತ್ತು ಸೈಕಲ್ ಜಾಥಾ ನಡೆಯಿತು.

ಮಾಜಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾದ ಆಡಳಿತ ನಿರ್ವಹಣೆಯಲ್ಲಿ ವಿಫಲವಾಗಿದ್ದು, ಜನರ ಬವಣೆಗಳನ್ನು ಆಲಿಸುತ್ತಿಲ್ಲ ಎಂದು ಟೀಕಿಸಿದರು.

ಡಿಸಿಸಿ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಬಂಟ್ವಾಳ ವಿಧಾನಸಭಾ ಉಸ್ತುವಾರಿ ಸವಿತಾ ರಮೇಶ್, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇ ಗೌಡ, ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ವೀಣಾ ಭಟ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ ಶಾಹುಲ್ ಹಮೀದ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ, ಕಿಸಾನ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಮೋಹನ್ ಗೌಡ ಕಲ್ಮಂಜ, ಪುರಸಭಾ ಅಧ್ಯಕ್ಷರಾದ ಮೊಹಮ್ಮದ್ ಶರೀಫ್, ಪುರಸಭಾ ಉಪಾಧ್ಯಕ್ಷರಾದ ಜೇಸಿಂತ ಡಿ’ಸೋಜ, ಮಹಾನಗರ ಪಾಲಿಕೆಯ ಸದಸ್ಯರಾದ ಮೊಹಮ್ಮದ್ ರೌಫ್,  ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಎಂ ಎಸ್ ಮೊಹಮ್ಮದ್, ಜಿಲ್ಲಾ ಅಸಂಘಟಿತ ಕಾರ್ಮಿಕ ಅಧ್ಯಕ್ಷರಾದ ಅಬ್ಬಾಸ್ ಅಲಿ, ಜಿಲ್ಲಾ ಸಹಕಾರಿ ಸಂಘದ ಸಂಚಾಲಕರಾದ ಸುದರ್ಶನ್ ಜೈನ್, ಬಂಟ್ವಾಳ ಹಾಗೂ ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರುಗಳಾದ ಮಲ್ಲಿಕಾ ವಿ ಶೆಟ್ಟಿ, ಲವೀನಾ ವಿಲ್ಮ ಮೋರಸ್, ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರುಗಳಾದ ಸುರೇಶ್ ಜೋರ, ಮೊಹಮ್ಮದ್ ನವಾಝ್ ಬಡಕಬೈಲು ಸಹಿತ ವಿವಿಧ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ರೈ ನೇತೃತ್ವದಲ್ಲಿ ಬಂಟ್ವಾಳದಲ್ಲಿ ಪಾದಯಾತ್ರೆ, ಸೈಕಲ್ ಜಾಥಾ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*